AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಎಸೆತ​ಗಳಲ್ಲಿ 63 ರನ್​: ಸಿಡಿಲಬ್ಬರದ ಶತಕ ಸಿಡಿಸಿದ ಮಾರ್ಟಿನ್ ಗಪ್ಟಿಲ್

Martin Guptill Records: ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ವೇಗದ ಶತಕ ಸಿಡಿಸುವ ಮೂಲಕ ನ್ಯೂಝಿಲೆಂಡ್ ಕ್ರಿಕೆಟರ್ ಮಾರ್ಟಿನ್ ಗಪ್ಟಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದರಲ್ಲೂ ಒಂದೇ ಓವರ್​ನಲ್ಲಿ 34 ರನ್​ ಚಚ್ಚಿ ಹೊಸ ಇತಿಹಾಸ ಬರೆದಿದ್ದಾರೆ. ಇದರ ಜೊತೆಗೆ 10+ ಸಿಕ್ಸ್ ಸಿಡಿಸಿದ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 03, 2024 | 12:38 PM

Share
ಲೆಜೆಂಡ್ಸ್ ಲೀಗ್ ಕ್ರಿಕೆಟ್​ ಟೂರ್ನಿಯ 12ನೇ ಪಂದ್ಯದಲ್ಲಿ ಮಾರ್ಟಿನ್ ಗಪ್ಟಿಲ್ ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಸೂರತ್​ನ ಲಾಲ್​ಭಾಯ್ ಕಾಂಟ್ರಾಕ್ಟರ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೋನಾರ್ಕ್ ಸೂರ್ಯಸ್ ಒಡಿಶಾ ಮತ್ತು ಸದರ್ನ್ ಸೂಪರ್ ಸ್ಟಾರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಸರ್ದನ್ ಸೂಪರ್ ಸ್ಟಾರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಕೋನಾರ್ಕ್ ಸೂರ್ಯಸ್ ಒಡಿಶಾ ಪರ ಆರಂಭಿಕ ಆಟಗಾರ ರಿಚರ್ಡ್ ಲೆವಿ 21 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 63 ರನ್ ಚಚ್ಚಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಯೂಸುಫ್ ಪಠಾಣ್ 33 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಕೋನಾರ್ಕ್ ಸೂರ್ಯಸ್ ಒಡಿಶಾ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು.

2 / 6
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸದರ್ನ್ ಸೂಪರ್ ಸ್ಟಾರ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಶ್ರೀವಾತ್ಸವ್ ಗೋಸ್ವಾಮಿ ಕೇವಲ 18 ರನ್​ಗಳಿಸಿ ಔಟಾಗಿದ್ದರು. ಈ ಆರಂಭಿಕ ಆಘಾತದ ಹೊರತಾಗಿಯೂ ಮತ್ತೊಂದು ತುದಿಯಲ್ಲಿದ್ದ ಮಾರ್ಟಿನ್ ಗಪ್ಟಿಲ್ ಇನಿಂಗ್ಸ್ ಕಟ್ಟುವ ಜವಾಬ್ದಾರಿಯನ್ನು ಹೆಗಲೇರಿಸಿಕೊಂಡಿದ್ದರು.

3 / 6
ಅದರಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮಾರ್ಟಿನ್ ಗಪ್ಟಿಲ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ ಫೋರ್​ಗಳ ಸುರಿಮಳೆಗೈಯ್ದರು. ಅದರಲ್ಲೂ ನವಿನ್ ಸ್ಟಿವರ್ಟ್ ಎಸೆದ 6ನೇ ಓವರ್​ನಲ್ಲಿ 6, 6, 6, 4, 6, 6 ಸಿಡಿಸುವ ಮೂಲಕ 34 ರನ್​ ಚಚ್ಚಿದರು. ಈ ಮೂಲಕ ಕೇವಲ 48 ಎಸೆತಗಳಲ್ಲಿ ಶತಕ ಪೂರೈಸಿದರು.

4 / 6
ಶತಕದ ಬಳಿಕವೂ ಆರ್ಭಟ ಮುಂದುವರೆಸಿದ ಗಪ್ಟಿಲ್ ನವಿನ್ ಸ್ಟಿವರ್ಟ್ ಎಸೆದ 15ನೇ ಓವರ್​ನಲ್ಲಿ 6, 6, 6, 4, 6 ಬಾರಿಸಿದರು. ಈ ಮೂಲಕ ಕೇವಲ 11 ಎಸೆತಗಳಲ್ಲಿ 62 ರನ್​ ಕಲೆಹಾಕಿದರು. ಅಂತಿಮವಾಗಿ 54 ಎಸೆತಗಳನ್ನು ಎದುರಿಸಿದ ಗಪ್ಟಿಲ್ 11 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 131 ರನ್ ಬಾರಿಸಿ 16 ಓವರ್​ಗಳಲ್ಲಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು. ಈ ಮೂಲಕ ಸದರ್ನ್​ ಸೂಪರ್ ಸ್ಟಾರ್ಸ್ ತಂಡವು ಈ ಪಂದ್ಯದಲ್ಲಿ 8 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

5 / 6
ಈ ಸಿಡಿಲಬ್ಬರದ ಶತಕದೊಂದಿಗೆ ಮಾರ್ಟಿನ್ ಗಪ್ಟಿಲ್ (131) ಲೆಜೆಂಡ್ಸ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಎಲ್​ಎಲ್​ಸಿನಲ್ಲಿ ಪಂದ್ಯವೊಂದರಲ್ಲಿ 10+ ಸಿಕ್ಸ್​ ಸಿಡಿಸಿದ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಇದಲ್ಲದೆ ಲೆಜೆಂಡ್ಸ್ ಲೀಗ್​ನಲ್ಲಿ ಒಂದೇ ಓವರ್​ನಲ್ಲಿ (34 ರನ್​) ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್