AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಳೇ ಏಳು ಪಂದ್ಯಗಳಲ್ಲಿ ಸಾರ್ವಕಾಲಿಕ ವಿಶ್ವ ದಾಖಲೆ ಮುರಿದ ಮ್ಯಾಥ್ಯೂ ಬ್ರೀಟ್ಝ್​ಕೆ

Matthew Breetzke Records: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲೆರಡು ಪಂದ್ಯಗಳ ಮೂಲಕ 200+ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯೊಂದಿಗೆ ಮತ್ತೊಂದು ಭರ್ಜರಿ ರೆಕಾರ್ಡ್ ಬರೆಯುವಲ್ಲಿ ಸೌತ್ ಆಫ್ರಿಕಾದ ಯುವ ದಾಂಡಿಗ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 06, 2025 | 7:56 AM

Share
ಏಕದಿನ ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲೇ 150 ರನ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದ ಸೌತ್ ಆಫ್ರಿಕಾದ ಯುವ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ( Matthew Breetzke) ಇದೀಗ ಮತ್ತೊಂದು ವರ್ಲ್ಡ್​ ರೆಕಾರ್ಡ್​ಗೆ ಕೊರೊಳೊಡ್ಡಿದ್ದಾರೆ. ಅದು ಕೂಡ ಏಳೇ ಏಳು ಪಂದ್ಯಗಳ ಮೂಲಕ ಎಂಬುದು ವಿಶೇಷ.

1 / 5
ಫೈಸಲಾಬಾದ್​​ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ಬ್ರೀಟ್ಝ್​ಕೆ 42 ರನ್ ಬಾರಿಸಿದ್ದರು. ಈ ನಲ್ವತ್ತೆರಡು ರನ್​​​ಗಗಳೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 7 ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಮ್ಯಾಥ್ಯೂ ಬ್ರೀಟ್ಝ್​ಕೆ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ಜಾನ್ನೆಮನ್ ಮಲಾನ್ ಹೆಸರಿನಲ್ಲಿತ್ತು. ಸೌತ್ ಆಫ್ರಿಕಾ ಪರ ಆಡಿದ ಮೊದಲ ಏಳು ಏಕದಿನ ಇನಿಂಗ್ಸ್​ಗಳ ಮೂಲಕ ಮಲಾನ್ ಒಟ್ಟು 506 ರನ್ ಬಾರಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ 7 ಪಂದ್ಯಗಳಲ್ಲಿ 500 ಕ್ಕೂ ಅಧಿಕ ರನ್​ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ಸಾರ್ವಕಾಲಿಕ ದಾಖಲೆ ಮುರಿಯುವಲ್ಲಿ ಮ್ಯಾಥ್ಯೂ ಬ್ರೀಟ್ಝ್​ಕೆ ಯಶಸ್ವಿಯಾಗಿದ್ದಾರೆ. ಈವರೆಗೆ 7 ಏಕದಿನ ಪಂದ್ಯಗಳನ್ನು ಮಾತ್ರ ಆಡಿರುವ ಮ್ಯಾಥ್ಯೂ ಬ್ರೀಟ್ಝ್​ಕೆ 1 ಶತಕ ಹಾಗೂ 4 ಅರ್ಧಶತಕಗಳೊಂದಿಗೆ ಒಟ್ಟು 509 ರನ್​​ ಗಳಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಏಳು ಪಂದ್ಯಗಳಲ್ಲಿ ಅತೀ ಹೆಚ್ಚು ರನ್​ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 5
ಈ ದಾಖಲೆಗೂ ಮುನ್ನ ಮ್ಯಾಥ್ಯೂ ಬ್ರೀಟ್ಝ್​ಕೆ ಏಕದಿನ ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದ್ದರು. ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 150 ರನ್​ ಸಿಡಿಸಿ ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದ್ದರು. ಅಷ್ಟೇ ಅಲ್ಲದೆ ಮೊದಲೆರಡು ಪಂದ್ಯಗಳಲ್ಲಿ 200+ ರನ್ ಕಲೆಹಾಕಿದ ಹಾಗೂ ಏಕದಿನ ಕ್ರಿಕೆಟ್​​ನಲ್ಲಿ ಆಡಿದ ಮೊದಲ 5 ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಪೇರಿಸಿದ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದ್ದರು. ಇದೀಗ ಏಳು ಇನಿಂಗ್ಸ್​​ಗಳಲ್ಲೇ 500+ ರನ್​​​ಗಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5

Published On - 7:53 am, Thu, 6 November 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು

'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ

‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್

ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ