Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್​ಕೆ

Pakistan vs South Africa: ಕರಾಚಿಯಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಮ್ಯಾಥ್ಯೂ ಬ್ರೀಟ್ಝ್​ಕೆ 83 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಸೌತ್ ಆಫ್ರಿಕಾ 50 ಓವರ್​ಗಳಲ್ಲಿ 352 ರನ್ ಕಲೆಹಾಕಿತ್ತು. ಈ ಗುರಿಯನ್ನು 49 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಪಾಕಿಸ್ತಾನ್ ತಂಡ 6 ವಿಕೆಟ್​ಗಳ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಈ ಪಂದ್ಯದ ಮೂಲಕ ಮ್ಯಾಥ್ಯೂ ಬ್ರೀಟ್ಝ್​ಕೆ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 13, 2025 | 12:54 PM

ಏಕದಿನ ಕ್ರಿಕೆಟ್​ನ ಪಾದಾರ್ಪಣೆ ಪಂದ್ಯದಲ್ಲೇ 150 ರನ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದ ಸೌತ್ ಆಫ್ರಿಕಾ ದಾಂಡಿಗ ಮ್ಯಾಥ್ಯೂ ಬ್ರೀಟ್ಝ್​ಕೆ ಇದೀಗ ಮತ್ತೊಂದು ವರ್ಲ್ಡ್​ ರೆಕಾರ್ಡ್​ಗೆ ಕೊರೊಳೊಡ್ಡಿದ್ದಾರೆ. ಅದು ಕೂಡ 50 ವರ್ಷಗಳ ಹಳೆಯ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಬುಧವಾರ (ಫೆ.12) ಕರಾಚಿಯಲ್ಲಿ ಪಾಕಿಸ್ತಾನ್ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ಬ್ರೀಟ್ಝ್​ಕೆ 84 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 83 ರನ್ ಬಾರಿಸಿದ್ದರು. ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಮ್ಯಾಥ್ಯೂ 148 ಎಸೆತಗಳಲ್ಲಿ 150 ರನ್ ಚಚ್ಚಿದ್ದರು.

2 / 5
ಈ ಎರಡು ಇನಿಂಗ್ಸ್​ಗಳ ಮೂಲಕ ಮ್ಯಾಥ್ಯೂ ಬ್ರೀಟ್ಝ್​ಕೆ ಒಟ್ಟು 233 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲೆರಡು ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಅಪರೂಪದ ದಾಖಲೆ ವೆಸ್ಟ್ ಇಂಡೀಸ್ ದಾಂಡಿಗನ ಹೆಸರಿನಲ್ಲಿತ್ತು.

3 / 5
1975 ರಲ್ಲಿ ವೆಸ್ಟ್ ಇಂಡೀಸ್ ಪರ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಡೆಸ್ಮಂಡ್ ಹೇನ್ಸ್ ಮೊದಲೆರಡು ಪಂದ್ಯಗಳ ಮೂಲಕ ಒಟ್ಟು 195 ರನ್ ಬಾರಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಎರಡು ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಚೊಚ್ಚಲ ಪಂದ್ಯದಲ್ಲಿ ಶತಕ ಹಾಗೂ ದ್ವಿತೀಯ ಮ್ಯಾಚ್​ನಲ್ಲಿ ಅರ್ಧಶತಕ ಬಾರಿಸಿ ಮ್ಯಾಥ್ಯೂ ಬ್ರೀಟ್ಝ್​ಕೆ ಈ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅಲ್ಲದೆ ಮೊದಲೆರಡು ಪಂದ್ಯಗಳ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 200+ ರನ್​ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಸಹ ಬ್ರೀಟ್ಝ್​ಕೆ ನಿರ್ಮಿಸಿದ್ದಾರೆ.

5 / 5
Follow us
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು

VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್

ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?

ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ

ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು