AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs SA: ಆಡಿರುವ ಐದೇ ಐದು ಏಕದಿನ ಪಂದ್ಯಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಜ್ಕೆ

matthew breetzke: ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಮ್ಯಾಥ್ಯೂ ಬ್ರೀಟ್ಜ್ಕೆ ಅವರ ಅಸಾಧಾರಣ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಈ ಗೆಲುವು ಸಾಧ್ಯವಾಗಿದೆ. ಅವರು ಏಕದಿನ ಕ್ರಿಕೆಟ್‌ನಲ್ಲಿ ಸತತ 5 ಇನ್ನಿಂಗ್ಸ್‌ಗಳಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಇದರಿಂದ ದಕ್ಷಿಣ ಆಫ್ರಿಕಾ ತಂಡವು ಏಕದಿನ ಸರಣಿಯನ್ನು ಸಹ ಗೆದ್ದುಕೊಂಡಿದೆ.

ಪೃಥ್ವಿಶಂಕರ
|

Updated on: Sep 05, 2025 | 8:00 PM

Share
ಏಕದಿನ ಹಾಗೂ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ದಕ್ಷಿಣ ಆಫ್ರಿಕಾ ತಂಡ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್‌ ನೆಲದಲ್ಲಿ ಇತಿಹಾಸ ನಿರ್ಮಿಸಿದೆ. ಹಾಗೆಯೇ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 330 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ 325 ರನ್ ಬಾರಿಸಲಷ್ಟೇ ಶಕ್ತವಾಗಿ 5 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆಫ್ರಿಕಾದ ಈ ಗೆಲುವಿನಲ್ಲಿ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಮ್ಯಾಥ್ಯೂ ಬ್ರೀಟ್ಜ್ಕೆ ಅವರ ಪ್ರದರ್ಶನ ಪ್ರಮುಖ ಪಾತ್ರವಹಿಸಿತು.

2 / 5
ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಬ್ರೀಟ್ಜ್ಕೆ ಕೇವಲ 77 ಎಸೆತಗಳಲ್ಲಿ 85 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ, ಬ್ರೀಟ್ಜ್ಕೆ ತಮ್ಮ ಏಕದಿನ ವೃತ್ತಿಜೀವನದಲ್ಲಿ ಇದುವರೆಗೆ ಆಡಿರುವ ಎಲ್ಲಾ 5 ಇನ್ನಿಂಗ್ಸ್‌ಗಳಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಅವರು ಸತತ 4 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದ ಭಾರತದ ನವಜೋತ್ ಸಿಂಗ್ ಸಿಧು ಅವರ ದಾಖಲೆಯನ್ನು ಮುರಿದಿದ್ದಾರೆ.

3 / 5
ಫೆಬ್ರವರಿ 2025 ರಲ್ಲಿ ಬ್ರೀಟ್ಜ್ಕೆ ತಮ್ಮ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ತಮ್ಮ ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ್ದರು. ಏಕದಿನಕ್ಕೆ ಪಾದಾರ್ಪಣೆ ಮಾಡಿದ 7 ತಿಂಗಳೊಳಗೆ ಕ್ರಮವಾಗಿ 83, 57, 88 ಮತ್ತು ಈಗ 85 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಇಲ್ಲಿಯವರೆಗೆ, ಬ್ರೀಟ್ಜ್ಕೆ 5 ಏಕದಿನ ಪಂದ್ಯಗಳಲ್ಲಿ 92.60 ಸರಾಸರಿಯಲ್ಲಿ 463 ರನ್ ಗಳಿಸಿದ್ದಾರೆ.

4 / 5
ಬ್ರೀಟ್ಜ್ಕೆ 83 ರನ್ ಗಳಿಸಿದ ಇನ್ನಿಂಗ್ಸ್‌ನಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು, ಇದರ ಆಧಾರದ ಮೇಲೆ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 330 ರನ್‌ಗಳ ಬೃಹತ್ ಸ್ಕೋರ್ ಗಳಿಸಿತು. ಅವರನ್ನು ಹೊರತುಪಡಿಸಿ, ಡೆವಾಲ್ಡ್ ಬ್ರೆವಿಸ್ 20 ಎಸೆತಗಳಲ್ಲಿ 42 ರನ್ ಗಳಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ 58 ರನ್ ಮತ್ತು ಐಡೆನ್ ಮಾರ್ಕ್ರಾಮ್ 49 ರನ್ ಗಳಿಸಿದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ