
ಏಕದಿಕ ಕ್ರಿಕೆಟ್ನಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ವೆಸ್ಟ್ ಇಂಡೀಸ್ನ ಯುವ ದಾಂಡಿಗ ಮ್ಯಾಥ್ಯೂ ಫೋರ್ಡ್ (Matthew Forde) ಬ್ಯಾಟ್ನಿಂದ. ವಿಶೇಷ ಎಂದರೆ ಈ ದಾಖಲೆಯೊಂದಿಗೆ ಮ್ಯಾಥ್ಯೂ, ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ (AB De Villiers) ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

ಡಬ್ಲಿನ್ನಲ್ಲಿ ನಡೆದ ಐರ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ಫೋರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರರೊಂದಿಗೆ ಮ್ಯಾಥ್ಯೂ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿತ್ತು. 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಎಬಿಡಿ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಹಾಫ್ ಸೆಂಚುರಿ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ 10 ವರ್ಷಗಳ ಬಳಿಕ ಎಬಿಡಿ ದಾಖಲೆಯನ್ನು ಸರಿಗಟ್ಟುವಲ್ಲಿ ಮ್ಯಾಥ್ಯೂ ಫೋರ್ಡ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು 23 ವರ್ಷದ ಮ್ಯಾಥ್ಯೂ ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಮ್ಯಾಥ್ಯೂ ಫೋರ್ಡ್ ಅವರ ಈ ಸ್ಪೋಟಕ ಅರ್ಧಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಈ ಪಂದ್ಯದಲ್ಲಿ 50 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 352 ರನ್ ಕಲೆಹಾಕಿತು. ಆದರೆ ಐರ್ಲೆಂಡ್ ಇನಿಂಗ್ಸ್ ಆರಂಭಕ್ಕೂ ಮುನ್ನ ಬರಲಾರಂಭಿಸಿದ್ದರಿಂದ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ.