Matthew Short: 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ ಓಪನರ್

England vs Australia: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಈ ಸೋಲಿನ ನಡುವೆ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ಬೌಲಿಂಗ್ ಮೂಲಕ ಎಂಬುದೇ ಇಲ್ಲಿ ವಿಶೇಷ.

|

Updated on: Sep 14, 2024 | 9:33 AM

ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆದರೆ ಈ ವರ್ಲ್ಡ್ ರೆಕಾರ್ಡ್ ಬರೆದಿರುವುದು ಬೌಲಿಂಗ್ ಮೂಲಕ ಎಂಬುದು ವಿಶೇಷ. ಕಾರ್ಡಿಫ್​ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಮ್ಯಾಥ್ಯೂ ಶಾರ್ಟ್ (28) ಹಾಗೂ ಟ್ರಾವಿಸ್ ಹೆಡ್ (31) ಭರ್ಜರಿ ಆರಂಭ ಒದಗಿಸಿದ್ದರು.

1 / 5
ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಯುವ ಸ್ಪೋಟಕ ದಾಂಡಿಗ ಜೇಕ್ ಪ್ರೇಸರ್ ಮೆಕ್​ಗುರ್ಕ್ 31 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅರ್ಧಶತಕ ಸಿಡಿಸಿದರು. ಈ ಹಾಫ್ ಸೆಂಚುರಿಯ ನೆರವಿನಿಂದ ಆಸ್ಟ್ರೇಲಿಯಾ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 193 ರನ್​ ಕಲೆಹಾಕಿತು.

2 / 5
194 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅತ್ತ ಆಂಗ್ಲರು ಲಯಬದ್ಧ ಬ್ಯಾಟಿಂಗ್ ಮುಂದುವರೆಸುತ್ತಿದ್ದಂತೆ ಆಸ್ಟ್ರೇಲಿಯಾ ತಂಡದ ಹಂಗಾಮಿ ನಾಯಕ ಟ್ರಾವಿಸ್ ಹೆಡ್ ಮ್ಯಾಥ್ಯೂ ಶಾರ್ಟ್​ ಕೈಗೆ ಚೆಂಡಿತ್ತರು. ಅದರಂತೆ ಸ್ಪಿನ್ ಮೋಡಿ ಶುರು ಮಾಡಿದ ಶಾರ್ಟ್ ಇಂಗ್ಲೆಂಡ್ ತಂಡಕ್ಕೆ ಆಘಾತದ ಮೇಲೆ ಆಘಾತ ನೀಡಿದರು.

3 / 5
ಆಸೀಸ್ ಪರ 7ನೇ ಬೌಲರ್ ಆಗಿ 3 ಓವರ್​ಗಳನ್ನು ಎಸೆದ ಮ್ಯಾಥ್ಯೂ ಶಾರ್ಟ್ ಕೇವಲ 22 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಐದು ವಿಕೆಟ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ 5 ವಿಕೆಟ್ ಪಡೆದ ಪೂರ್ಣ ಸದಸ್ಯ ರಾಷ್ಟ್ರದ ಮೊದಲ ಆರಂಭಿಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ಈ ಸಾಧನೆ ಮಾಡಿದ ಆಸೀಸ್ ತಂಡದ ಮೊದಲ ಓಪನರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

4 / 5
ಇನ್ನು ಮ್ಯಾಥ್ಯೂ ಶಾರ್ಟ್ ಅವರ ಈ 5 ವಿಕೆಟ್​ಗಳ ಸಾಧನೆಯ ನಡುವೆಯು ಇಂಗ್ಲೆಂಡ್ ಪರ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿದರು. ಕೇವಲ 47 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 87 ರನ್ ಸಿಡಿಸಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು 19 ಓವರ್​ಗಳಲ್ಲಿ 194 ರನ್​ಗಳಿಸಿ 3 ವಿಕೆಟ್​ಗಳ ಜಯ ಸಾಧಿಸಿತು.

5 / 5
Follow us