AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್​ಮನ್

Matthew Spoors: ಜರ್ಮನಿ ವಿರುದ್ದ ನಡೆದ ಈ ಪಂದ್ಯದಲ್ಲಿ ಮ್ಯಾಥ್ಯೂ 55 ಎಸೆತಗಳಲ್ಲಿ 73 ರನ್ ಬಾರಿಸಿದ್ದರು. ಈ ಮೂಲಕ ಜರ್ಮನಿ ನೀಡಿ 132 ರನ್​ಗಳ ಟಾರ್ಗೆಟ್​ ಅನ್ನು ಕೆನಡಾ 19.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿತು.

TV9 Web
| Edited By: |

Updated on:Feb 22, 2022 | 5:39 PM

Share
ಟಿ20 ಕ್ರಿಕೆಟ್​ನಲ್ಲಿ ಶತಕಗಳು ಮೂಡಿಬರುವುದು ಬಲು ಅಪರೂಪ. ಆದರೆ ಕೆನಡಾದ 22 ವರ್ಷದ ಯುವ ಬ್ಯಾಟ್ಸ್​ಮನ್ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಹೀಗೆ ಮೊದಲ ಪಂದ್ಯದಲ್ಲೇ ವಿಶ್ವ ದಾಖಲೆ ಬರೆದ ಆಟಗಾರನ ಹೆಸರು ಮ್ಯಾಥ್ಯೂ ಸ್ಪೂರ್ಸ್.

1 / 5
 T20 ವಿಶ್ವಕಪ್ ಕ್ವಾಲಿಫೈಯರ್‌ ಪಂದ್ಯದಲ್ಲಿ ಫಿಲಿಪೈನ್ಸ್ ವಿರುದ್ಧ ಚೊಚ್ಚಲ ಪಂದ್ಯವಾಡಿದ ಮ್ಯಾಥ್ಯೂ ಸ್ಪೂರ್ಸ್ ಮೊದಲ ಇನ್ನಿಂಗ್ಸ್‌ನಲ್ಲೇ ಶತಕ ಸಿಡಿಸಿದರು. ಈ ಮೂಲಕ ಟಿ20 ಪದಾರ್ಪಣೆ ಪಂದ್ಯದಲ್ಲಿ ಸೆಂಚುರಿ ಬಾರಿಸಿದ ಮೊದಲ ಆಟಗಾರ ಎಂಬ ವಿಶ್ವ ದಾಖಲೆ ಬರೆದರು.

2 / 5
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮ್ಯಾಥ್ಯೂ ಸ್ಪೂರ್ಸ್  66 ಎಸೆತಗಳಲ್ಲಿ ಅಜೇಯ 108 ರನ್ ಬಾರಿಸಿದರು. ಈ ವೇಳೆ ಅವರ ಬ್ಯಾಟ್‌ನಿಂದ 14 ಬೌಂಡರಿ ಹಾಗೂ 3 ಸಿಕ್ಸರ್‌ಗಳು ಮೂಡಿಬಂದಿತು. ಮ್ಯಾಥ್ಯೂ ಸ್ಪರ್ಸ್ ಅವರ ಈ ಅಜೇಯ ಶತಕದ ನೆರವಿನಿಂದ ಕೆನಡಾ ತಂಡವು 20 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 216 ರನ್ ಗಳಿಸಿತು.

3 / 5
ಈ ಬೃಹತ್ ಗುರಿ ಬೆನ್ನತ್ತಿದ  ಫಿಲಿಪೈನ್ಸ್ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ  98 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಕೆನಡಾ ತಂಡವು 118 ರನ್‌ಗಳ ಬೃಹತ್ ಅಂತರದಿಂದ ಗೆಲುವು ದಾಖಲಿಸಿತು.

4 / 5
ಇನ್ನು ಈ ಪಂದ್ಯದ ಬಳಿಕ 2ನೇ ಪಂದ್ಯದಲ್ಲೂ ಮ್ಯಾಥ್ಯೂ ಸ್ಪೂರ್ಸ್ ಅಬ್ಬರಿಸಿದ್ದರು. ಜರ್ಮನಿ ವಿರುದ್ದ ನಡೆದ ಈ ಪಂದ್ಯದಲ್ಲಿ ಮ್ಯಾಥ್ಯೂ 55 ಎಸೆತಗಳಲ್ಲಿ 73 ರನ್ ಬಾರಿಸಿದ್ದರು. ಈ ಮೂಲಕ ಜರ್ಮನಿ ನೀಡಿ 132 ರನ್​ಗಳ ಟಾರ್ಗೆಟ್​ ಅನ್ನು ಕೆನಡಾ 19.3 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಜಯ ಸಾಧಿಸಿತು.

5 / 5

Published On - 5:38 pm, Tue, 22 February 22

Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ