AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ: ಮುಂದಿನ ತಿಂಗಳಿಂದ ಕೋಚ್

Matthew Wade: ಆಸ್ಟ್ರೇಲಿಯಾ ತಂಡದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಟ್ಟು 4682 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 29, 2024 | 7:31 AM

Share
ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದ ವೇಡ್ 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 13 ವರ್ಷಗಳ ಇಂಟರ್​ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಲು ವೇಡ್ ನಿರ್ಧರಿಸಿದ್ದಾರೆ.

1 / 5
ಮ್ಯಾಥ್ಯೂ ವೇಡ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಅಕ್ಟೋಬರ್ 2011 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದೊಂದಿಗೆ ಶುರುವಾಗಿತ್ತು. ಅಂದಿನಿಂದ ಜೂನ್ 2024 ರವರೆಗೆ ಅವರು 92 ಟಿ20 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಟ್ಟು 1202 ರನ್ ಗಳಿಸಿದ್ದಾರೆ.

2 / 5
ಹಾಗೆಯೇ 97 ಏಕದಿನ ಪಂದ್ಯಗಳನ್ನಾಡಿರುವ ವೇಡ್ 1867 ರನ್ ಕಲೆಹಾಕಿದ್ದಾರೆ. ಫೆಬ್ರವರಿ 2012 ರಲ್ಲಿ ಏಕದಿನ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವೇಡ್, ಜುಲೈ 2021 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿ 50 ಓವರ್​ಗಳ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.

3 / 5
ಇನ್ನು ಏಪ್ರಿಲ್ 2012 ರಲ್ಲಿ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವೇಡ್, ಜನವರಿ 2021 ರಲ್ಲಿ ಭಾರತದ ವಿರುದ್ಧ ಕೊನೆಯ ಪಂದ್ಯವಾಡಿದ್ದರು. ಇದರ ನಡುವೆ ಅವರು 36 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದು, ಮೂರು ಅರ್ಧಶತಕಗಳೊಂದಿಗೆ ಒಟ್ಟು 1202 ರನ್ ಕಲೆಹಾಕಿದ್ದಾರೆ.

4 / 5
ಇದೀಗ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಮ್ಯಾಥ್ಯೂ ವೇಡ್ ರಾಷ್ಟ್ರೀಯ ತಂಡದೊಂದಿಗೆ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಅಂದರೆ ಮುಂದಿನ ತಿಂಗಳು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿ ವೇಳೆ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ವೇಡ್ ಕಾರ್ಯ ನಿರ್ವವಹಿಸಲಿದ್ದಾರೆ. ಈ ಮೂಲಕ ನಿವೃತ್ತಿ ಬೆನ್ನಲ್ಲೇ ಮ್ಯಾಥ್ಯೂ ವೇಡ್ ಸಹಾಯಕ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!