ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ: ಮುಂದಿನ ತಿಂಗಳಿಂದ ಕೋಚ್
Matthew Wade: ಆಸ್ಟ್ರೇಲಿಯಾ ತಂಡದ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 4682 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಶತಕ ಹಾಗೂ 19 ಅರ್ಧಶತಕಗಳನ್ನು ಬಾರಿಸಿದ್ದಾರೆ.
1 / 5
ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಮೂರು ಸ್ವರೂಪಗಳಲ್ಲೂ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದ ವೇಡ್ 2021 ರಲ್ಲಿ ಆಸೀಸ್ ಪಡೆ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ 13 ವರ್ಷಗಳ ಇಂಟರ್ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಲು ವೇಡ್ ನಿರ್ಧರಿಸಿದ್ದಾರೆ.
2 / 5
ಮ್ಯಾಥ್ಯೂ ವೇಡ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಅಕ್ಟೋಬರ್ 2011 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದೊಂದಿಗೆ ಶುರುವಾಗಿತ್ತು. ಅಂದಿನಿಂದ ಜೂನ್ 2024 ರವರೆಗೆ ಅವರು 92 ಟಿ20 ಪಂದ್ಯಗಳನ್ನಾಡಿದ್ದರು. ಈ ವೇಳೆ ಒಟ್ಟು 1202 ರನ್ ಗಳಿಸಿದ್ದಾರೆ.
3 / 5
ಹಾಗೆಯೇ 97 ಏಕದಿನ ಪಂದ್ಯಗಳನ್ನಾಡಿರುವ ವೇಡ್ 1867 ರನ್ ಕಲೆಹಾಕಿದ್ದಾರೆ. ಫೆಬ್ರವರಿ 2012 ರಲ್ಲಿ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ವೇಡ್, ಜುಲೈ 2021 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಬಾರಿ 50 ಓವರ್ಗಳ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು.
4 / 5
ಇನ್ನು ಏಪ್ರಿಲ್ 2012 ರಲ್ಲಿ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವೇಡ್, ಜನವರಿ 2021 ರಲ್ಲಿ ಭಾರತದ ವಿರುದ್ಧ ಕೊನೆಯ ಪಂದ್ಯವಾಡಿದ್ದರು. ಇದರ ನಡುವೆ ಅವರು 36 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದು, ಮೂರು ಅರ್ಧಶತಕಗಳೊಂದಿಗೆ ಒಟ್ಟು 1202 ರನ್ ಕಲೆಹಾಕಿದ್ದಾರೆ.
5 / 5
ಇದೀಗ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಮ್ಯಾಥ್ಯೂ ವೇಡ್ ರಾಷ್ಟ್ರೀಯ ತಂಡದೊಂದಿಗೆ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ. ಅಂದರೆ ಮುಂದಿನ ತಿಂಗಳು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿ ವೇಳೆ ಆಸ್ಟ್ರೇಲಿಯಾ ತಂಡದ ವಿಕೆಟ್ ಕೀಪಿಂಗ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ವೇಡ್ ಕಾರ್ಯ ನಿರ್ವವಹಿಸಲಿದ್ದಾರೆ. ಈ ಮೂಲಕ ನಿವೃತ್ತಿ ಬೆನ್ನಲ್ಲೇ ಮ್ಯಾಥ್ಯೂ ವೇಡ್ ಸಹಾಯಕ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.