- Kannada News Photo gallery Cricket photos Mayank Agarwal Turns 32; Cricket Fraternities wishes Indian cricket on his birthday; Read in Kannada
Happy Birthday Mayank Agarwal: 32ನೇ ವರ್ಷಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಬ್ಯಾಟರ್ ಮಯಾಂಕ್ ಅಗರ್ವಾಲ್: ಹೆಮ್ಮೆಯ ಕನ್ನಡಿಗನ ಬಗ್ಗೆ ನಿಮಗೆಷ್ಟು ಗೊತ್ತು?
Mayank Agarwal Birthday: ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಮಾಯಾಂಕ್ ಅಗರ್ವಾಲ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕರ್ನಾಟಕದ ಹೆಮ್ಮೆಯ ಕ್ರಿಕೆಟಿಗ 32 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಯಾಂಕ್ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
Updated on: Feb 16, 2023 | 7:46 AM

ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಮಾಯಾಂಕ್ ಅಗರ್ವಾಲ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕರ್ನಾಟಕದ ಹೆಮ್ಮೆಯ ಕ್ರಿಕೆಟಿಗ 32 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಯಾಂಕ್ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಮಾಯಾಂಕ್ ಅಗರ್ವಾಲ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕರ್ನಾಟಕದ ಹೆಮ್ಮೆಯ ಕ್ರಿಕೆಟಿಗ 32 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮಯಾಂಕ್ ಜನ್ಮದಿನಕ್ಕೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಟೆಸ್ಟ್ ಕ್ರಿಕೆಟ್ನಲ್ಲಿ ವಿಶೇಷ ಚಾಪು ಮೂಡಿಸಿದ್ದ ಮಾಯಾಂಕ್ ಅಗರ್ವಾಲ್ 1991 ರ ಫೆಬ್ರವರಿ 16 ರಂದು ಬೆಂಗಳೂರಿನಲ್ಲಿ ಜನಿಸಿದರು. ಬಿಷಪ್ ಕಾಟನ್ ಬಾಲಕರ ಶಾಲೆ ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ.

ಈವರೆಗೆ 21 ಟೆಸ್ಟ್ ಪಂದ್ಯ ಆಡಿರುವ ಮಯಾಂಕ್ 2017-18 ರಣಜಿ ಪಂದ್ಯಾವಳಿಯಲ್ಲಿ ಗಳಿಸಿದ 304 ರನ್ಗಳು ಆಯ್ಕೆದಾರರ ಗಮನ ಸೆಳೆಯಿತು. ಅಲ್ಲದೆ ಮಾಯಾಂಕ್ ಆ ಆವೃತ್ತಿಯಲ್ಲಿ ಎಲ್ಲ ಪಂದ್ಯಗಳನ್ನು ಸೇರಿ ಒಟ್ಟು 1,160 ರನ್ ಗಳಿಸಿದರು. ಅದೇ ವರ್ಷ ನಡೆದ ವಿಜಯ್ ಹಜಾರೆ ಟ್ರೋಫಿಯಲ್ಲೂ ಅದ್ಭುತ ಪ್ರದರ್ಶನ ನೀಡಿದರು.

2017-18ರ ಸಾಲಿನಲ್ಲಿ ಭರ್ಜರಿ ಪ್ರದರ್ಶನ ತೋರಿದ ಮಾಯಾಂಕ್ ಆ ವರ್ಷ ದೇಶೀಯ ಎಲ್ಲಾ ಕ್ರಿಕೆಟ್ ಸ್ವರೂಪಗಳಲ್ಲಿ ಒಟ್ಟು 2,141 ರನ್ ಗಳಿಸಿ ಹಲವಾರು ದಾಖಲೆಗಳನ್ನು ಮುರಿದರು.

2018 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಅವರು ಈವರೆಗೆ 21 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ನಾಲ್ಕು ಶತಕ ಮತ್ತು ಆರು ಅರ್ಧಶತಕಗಳೊಂದಿಗೆ 1,488 ರನ್ ಗಳಿಸಿದ್ದಾರೆ. 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಗಳಿಸಿದ 243 ಸ್ಕೋರ್ ಟೆಸ್ಟ್ನಲ್ಲಿ ಅವರ ವೈಯಕ್ತಿಕ ಅತ್ಯಧಿಕ ರನ್ ಆಗಿದೆ.

ಮಯಾಂಕ್ 2019 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಟೆಸ್ಟ್ ಶತಕವನ್ನು ಗಳಿಸಿದರು. ನಂತರ ಆ ಶತಕವನ್ನು ಡಬಲ್ ಸೆಂಚುರಿ ಆಗಿ ಪರಿವರ್ತಿಸಿದರು. ಮಾಯಾಂಕ್ ಅಗರ್ವಾಲ್ ಪ್ರಸ್ತುತ ಟೀಮ್ ಇಂಡಿಯಾದಿಂದ ದೂರವಿದ್ದು ಇದೀಗ ರಣಜಿ ಬಳಿಕ ಐಪಿಎಲ್ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.

ಮೊನ್ನೆಯಷ್ಟೆ ನಡೆದ ರಣಜಿ ಟ್ರೋಫಿಯಲ್ಲಿ ಮಯಾಂಕ್ ದ್ವಿತಶಕ ಸಿಡಿಸಿ ಅಬ್ಬರಿಸಿದ್ದರು. ಸೌರಾಷ್ಟ್ರ ವಿರುದ್ಧ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಕರ್ನಾಟಕದ ನಾಯಕ 429 ಎಸೆತಗಳಲ್ಲಿ 28 ಫೋರ್, 5 ಸಿಕ್ಸರ್ನೊಂದಿಗೆ 249 ರನ್ ಚಚ್ಚಿದ್ದರು. ಆದರೆ, ಈ ಪಂದ್ಯದಲ್ಲಿ ಸೋತ ರಾಜ್ಯ ತಂಡ ಫೈನಲ್ಗೇರಲು ವಿಫಲವಾಯಿತು.

ಮಯಾಂಕ್ ಅವರು ಟೀಮ್ ಇಂಡಿಯಾ ಪರ ಕೊನೆಯದಾಗಿ 2022ರ ಮಾರ್ಚ್ನಲ್ಲಿ ಶ್ರೀಲಂಕಾ ವಿರುದ್ಧ ಕಣಕ್ಕಿಳಿದಿದ್ದರು. ಆ ಬಳಿಕ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶುಭ್ಮನ್ ಗಿಲ್ ತಂಡದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಕಾರಣ ಇವರಿಗೆ ತಂಡದಲ್ಲಿ ಸ್ಥಾನವಿಲ್ಲದಂತಾಗಿದೆ.



















