Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಿಸ್ ಪೆರ್ರಿ ದಾಖಲೆ ಮುರಿದ ಮೆಗ್ ಲ್ಯಾನಿಂಗ್

WPL 2025: ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800+ ರನ್ ಕಲೆಹಾಕಿರುವುದು ಕೇವಲ ಇಬ್ಬರು ಬ್ಯಾಟರ್ ಗಳು ಮಾತ್ರ. ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ ಆರ್​ಸಿಬಿ ತಂಡದ ಎಲ್ಲಿಸ್ ಪೆರ್ರಿ. ಇದೀಗ ಪೆರ್ರಿ ದಾಖಲೆ ಮುರಿದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ರನ್ ಸರದಾರಿಣಿ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 01, 2025 | 7:34 AM

ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ (WPL 2025) ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ RCB ಆಟಗಾರ್ತಿ ಎಲ್ಲಿಸ್ ಪೆರ್ರಿ ಬರೆದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ WPLನ 13ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರುಗಳಲ್ಲಿ 9 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿತು.

2 / 6
124 ರನ್​ಗಳ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮ ಸ್ಪೋಟಕ ಆರಂಭ ಒದಗಿಸಿದ್ದರು. ಕೇವಲ 28 ಎಸೆತಗಳನ್ನು ಎದುರಿಸಿದ ಶಫಾಲಿ 3 ಸಿಕ್ಸ್ ಹಾಗೂ 4 ಫೋರ್ ಗಳೊಂದಿಗೆ 43 ರನ್ ಬಾರಿಸಿ ಔಟಾದರು.

3 / 6
ಇದಾಗ್ಯೂ ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಮೆಗ್ ಲ್ಯಾನಿಂಗ್ 49 ಎಸೆತಗಳಲ್ಲಿ 9 ಫೋರ್ ಗಳೊಂದಿಗೆ 60 ರನ್ ಬಾರಿಸಿ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು. ಈ ಅರ್ಧಶತಕದೊಂದಿಗೆ ಲ್ಯಾನಿಂಗ್ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ 800 ರನ್ ಪೂರೈಸಿದ್ದಾರೆ.

4 / 6
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಎಲ್ಲಿಸ್ ಪೆರ್ರಿ. ಆರ್​ಸಿಬಿ ಪರ 22 ಇನಿಂಗ್ಸ್ ಆಡಿರುವ ಪೆರ್ರಿ 631 ಎಸೆತಗಳನ್ನು ಎದುರಿಸಿ ಒಬ್ಬ 835 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಎಂಟು ನೂರು ರನ್ ಕಲೆಹಾಕಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದರು.

5 / 6
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಪರ 24 ಇನಿಂಗ್ಸ್ ಆಡಿರುವ ಮೆಗ್ ಲ್ಯಾನಿಂಗ್ 671 ಎಸೆತಗಳಲ್ಲಿ 845 ರನ್ ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಲ್ಯಾನಿಂಗ್ ಅಗ್ರಸ್ಥಾನಕ್ಕೇರಿದ್ದಾರೆ.

6 / 6
Follow us