AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಕ್ರಿಕೆಟ್​ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮೆಗ್ ಲ್ಯಾನಿಂಗ್

Meg Lanning Records: ಲ್ಯಾನಿಂಗ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು 3 ಟಿ20 ವಿಶ್ವಕಪ್ (2014, 2018, 2020) ಹಾಗೂ 1 ಏಕದಿನ ವಿಶ್ವಕಪ್ (2022) ಗೆದ್ದಿತ್ತು.

TV9 Web
| Edited By: |

Updated on: Feb 26, 2023 | 10:30 PM

Share
ಕೇಪ್​ಟೌನ್​ನಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಸೌತ್ ಆಫ್ರಿಕಾ ವಿರುದ್ಧ ನಡೆದ ಫೈನಲ್ ಫೈಟ್​ನಲ್ಲಿ ಆಸೀಸ್ ವನಿತೆಯರು 19 ರನ್​ಗಳಿಂದ ಜಯ ಸಾಧಿಸಿದರು. ವಿಶೇಷ ಎಂದರೆ ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ವಿಶ್ವ ದಾಖಲೆಯನ್ನು ಕೂಡ ನಿರ್ಮಿಸಿದರು.

1 / 6
ಟಿ20 ವಿಶ್ವಕಪ್​ನಲ್ಲಿ  ಆಸ್ಟ್ರೇಲಿಯಾ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸುವುದರೊಂದಿಗೆ ಅತೀ ಹೆಚ್ಚು ಐಸಿಸಿ ಟ್ರೋಫಿಗಳನ್ನು ಗೆದ್ದ ಕ್ಯಾಪ್ಟನ್ ಎಂಬ ವಿಶ್ವ ದಾಖಲೆ ಮೆಗ್ ಲ್ಯಾನಿಂಗ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು.

2 / 6
ರಿಕಿ ಪಾಂಟಿಂಗ್ ತಮ್ಮ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಎರಡು ಏಕದಿನ ವಿಶ್ವಕಪ್ (2003, 2007) ಹಾಗೂ ಎರಡು ಚಾಂಪಿಯನ್ಸ್ ಟ್ರೋಫಿ (2006, 2009) ತಂದುಕೊಟ್ಟಿದ್ದರು. ಈ ಮೂಲಕ ಅತ್ಯಧಿಕ ಐಸಿಸಿ ಟ್ರೋಫಿ ಗೆದ್ದ ನಾಯಕ ಎನಿಸಿಕೊಂಡಿದ್ದರು.

3 / 6
ಇದೀಗ 5ನೇ ಬಾರಿ ಐಸಿಸಿ ಟ್ರೋಫಿ ಗೆಲ್ಲುವ ಮೂಲಕ ಮೆಗ್ ಲ್ಯಾನಿಂಗ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಇದಕ್ಕೂ ಮುನ್ನ ಲ್ಯಾನಿಂಗ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡವು 3 ಟಿ20 ವಿಶ್ವಕಪ್ (2014, 2018, 2020) ಹಾಗೂ 1 ಏಕದಿನ ವಿಶ್ವಕಪ್ (2022) ಗೆದ್ದಿತ್ತು.

4 / 6
ಇದೀಗ ನಾಲ್ಕನೇ ಬಾರಿ ತಂಡವನ್ನು ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಮೆಗ್ ಲ್ಯಾನಿಂಗ್ ಒಟ್ಟು 5 ಐಸಿಸಿ ಟ್ರೋಫಿ ಗೆದ್ದ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. ಈ ಮೂಲಕ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ. ಅಷ್ಟೇ ಅಲ್ಲದೆ ಐದು ವಿಶ್ವಕಪ್ ಗೆದ್ದ ಏಕೈಕ ನಾಯಕಿ ಎಂಬ ವಿಶ್ವ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಅಂದಹಾಗೆ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದಲ್ಲಿ ಭಾರತ ತಂಡವು 2007 ರಲ್ಲಿ ಟಿ20 ವಿಶ್ವಕಪ್, 2011 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತ್ತು. ಅದರಂತೆ ಅತ್ಯಧಿಕ ಐಸಿಸಿ ಟ್ರೋಫಿ ಗೆದ್ದ ನಾಯಕರುಗಳ ಪಟ್ಟಿಯಲ್ಲಿ ಧೋನಿ 3ನೇ ಸ್ಥಾನದಲ್ಲಿದ್ದಾರೆ.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!