AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್​ನಲ್ಲಿ ಹೊಸ ಇತಿಹಾಸ… ವಿಶ್ವ ದಾಖಲೆ ಬರೆದ ಮೆಹಿದಿ ಹಸನ್ ಮಿರಾಝ್

BAN vs ZIM: ಝಿಂಬಾಬ್ವೆ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು ಮೊದಲ ಇನಿಂಗ್ಸ್​ನಲ್ಲಿ 227 ರನ್ ಕಲೆಹಾಕಿದರೆ, ಬಾಂಗ್ಲಾದೇಶ್ ತಂಡ 444 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 111 ರನ್​ಗಳಿಗೆ ಆಲೌಟ್ ಆಗುವ ಮೂಲಕ ಝಿಂಬಾಬ್ವೆ ತಂಡ 106 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಝಾಹಿರ್ ಯೂಸುಫ್
|

Updated on: May 01, 2025 | 12:30 PM

Share
ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದವರು ಬಾಂಗ್ಲಾದೇಶ್ ತಂಡದ ಯುವ ಆಲ್​ರೌಂಡರ್ ಮೆಹಿದಿ ಹಸನ್ ಮಿರಾಝ್. ಚಟ್ಟೋಗ್ರಾಮ್​ನಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಆಲ್​ರೌಂಡರ್ ಪ್ರದರ್ಶನ ನೀಡುವ ಮೂಲಕ ಮಿರಾಝ್ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ.

1 / 6
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು ಮೊದಲ ಇನಿಂಗ್ಸ್​ನಲ್ಲಿ 227 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಪರ ಮೆಹಿದಿ ಹಸನ್ ಮಿರಾಝ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 162 ಎಸೆತಗಳನ್ನು ಎದುರಿಸಿದ ಮೆಹಿದಿ, 1 ಸಿಕ್ಸ್ 11 ಫೋರ್​ಗಳೊಂದಿಗೆ ಮೂರನೇ ದಿನದಾಟದಲ್ಲಿ ಶತಕ ಪೂರೈಸಿದರು. ಈ ಮೂಲಕ ಬಾಂಗ್ಲಾದೇಶ್ ತಂಡದ ಸ್ಕೋರ್ ಅನ್ನು 444 ಕ್ಕೆ ತಂದು ನಿಲ್ಲಿಸಿದರು.

2 / 6
ಬಾಂಗ್ಲಾದೇಶ್ ತಂಡವು 444 ರನ್​ಗಳಿಗೆ ಆಲೌಟ್ ಆದ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಝಿಂಬಾಬ್ವೆ ತಂಡವು ಕೇವಲ 111 ರನ್​ಗಳಿಗೆ ಆಲೌಟ್ ಆಯಿತು. ಬಾಂಗ್ಲಾದೇಶ್ ಪರ ಮೆಹಿದಿ ಹಸನ್ ಮಿರಾಝ್  5 ವಿಕೆಟ್ ಕಬಳಿಸಿ ಮಿಂಚಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಕೂಡ ನಿರ್ಮಾಣವಾಯಿತು.

3 / 6
ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ದಿನ ಶತಕ ಪೂರೈಸಿ, 5 ವಿಕೆಟ್ ಕಬಳಿಸಿದ ಏಷ್ಯಾದ ಮೊದಲ ಆಟಗಾರ ಹಾಗೂ ವಿಶ್ವದ 2ನೇ ಆಲ್​ರೌಂಡರ್ ಎಂಬ ಹೆಗ್ಗಳಿಕೆಯನ್ನು ಮೆಹಿದಿ ಹಸನ್ ಮಿರಾಝ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಇಂತಹದೊಂದು ಸಾಧನೆ ಮಾಡಿದ್ದು ಇಂಗ್ಲೆಂಡ್​ನ ಇಯಾನ್ ಬಾಥಮ್.

4 / 6
1984 ರಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಲ್​ರೌಂಡರ್ ಇಯಾನ್ ಬಾಥಮ್ ಒಂದೇ ದಿನ ಶತಕ ಪೂರೈಸಿ, ಅದೇ ದಿನ 5 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ 41 ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಮೆಹಿದಿ ಹಸನ್ ಮಿರಾಝ್ ಯಶಸ್ವಿಯಾಗಿದ್ದಾರೆ. 

5 / 6
ಝಿಂಬಾಬ್ವೆ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂರನೇ ದಿನ ಶತಕ ಪೂರೈಸಿದ ಮೆಹಿದಿ ಹಸನ್ (104) , ಅದೇ ದಿನ 21 ಓವರ್​ಗಳಲ್ಲಿ ಕೇವಲ 32 ರನ್ ನೀಡಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಮೆಹಿದಿ ಹಸನ್ ಮಿರಾಝ್ ಅಪರೂಪದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?