- Kannada News Photo gallery Cricket photos Michael Leask Creates New world record Wtih Highest strike rate
ಐದೇ 5 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೈಕೆಲ್ ಲೀಸ್ಕ್
Michael Leask World Records: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮತ್ಯಾರೂ ಅಲ್ಲ, ಸ್ಕಾಟ್ಲೆಂಡ್ ತಂಡದ ಆಲ್ರೌಂಡರ್ ಮೈಕೆಲ್ ಲೀಸ್ಕ್. ಅದು ಕೂಡ ಕೇವಲ 5 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳನ್ನು ಬಾರಿಸುವ ಮೂಲಕ ಎಂಬುದು ವಿಶೇಷ.
Updated on: Feb 12, 2026 | 8:10 AM

ಟಿ20 ವಿಶ್ವಕಪ್ನ ಸ್ಕಾಟ್ಲೆಂಡ್ ತಂಡದ ಮೈಕೆಲ್ ಲೀಸ್ಕ್ (Michael Leask) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕೇವಲ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ ರನ್ಗಳಿಸಿ ಬ್ಯಾಟರ್ ಎಂಬ ದಾಖಲೆ ಲೀಸ್ಕ್ ಪಾಲಾಗಿದೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಇಟಲಿ ವಿರುದ್ಧದ ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೈಕೆಲ್ ಲೀಸ್ಕ್ 5 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 22 ರನ್ ಬಾರಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ ಕನಿಷ್ಠ 20+ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಲೀಸ್ಕ್ ಅಗ್ರಸ್ಥಾನಕ್ಕೇರಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ನ ಡ್ವೇನ್ ಸ್ಮಿತ್ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶ್ ವಿರುದ್ಧ ಸ್ಮಿತ್ ಕೇವಲ 7 ಎಸೆತಗಳಲ್ಲಿ 29 ರನ್ ಬಾರಿಸಿದ್ದರು. ಅಂದರೆ ಅಂದು ಅವರು 414.28 ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ ಈ ದಾಖಲೆ ಬರೆದಿದ್ದರು.

ಇದೀಗ 440ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ ಮೈಕೆಲ್ ಲೀಸ್ಕ್ ಕೇವಲ 5 ಎಸೆತಗಳಲ್ಲಿ 22 ರನ್ ಚಚ್ಚಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತ್ಯುತ್ತಮ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿ 20ಕ್ಕಿಂತ ಅಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವುದು ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್. 2007ರ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್ ವಿರುದ್ಧ 362.5 ಸ್ಟ್ರೈಕ್ ರೇಟ್ನಲ್ಲಿ 16 ಎಸೆತಗಳಲ್ಲಿ 58 ರನ್ ಬಾರಿಸಿ ಈ ಸಾಧನೆ ಮಾಡಿದ್ದಾರೆ. ಇದೀಗ 440ರ ಸ್ಟ್ರೈಕ್ ರೇಟ್ ಮೂಲಕ ಮೈಕೆಲ್ ಲೀಸ್ಕ್ ಎಲ್ಲರನ್ನು ಹಿಂದಿಕ್ಕಿ ಹೊಸ ಇತಿಹಾಸ ಬರೆದಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




