AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈಗಾಗಲೇ 10 ತಂಡಗಳು ಮೊದಲ ಪಂದ್ಯವನ್ನಾಡಿದ್ದು, ಇದರಲ್ಲಿ 5 ತಂಡಗಳು ಶುಭಾರಂಭ ಮಾಡಿದರೆ, ಮತ್ತೈದು ತಂಡಗಳು ಸೋಲಿನ ರುಚಿ ನೋಡಿದೆ. ಈ ಸೋಲು-ಗೆಲುವುಗಳ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

ಝಾಹಿರ್ ಯೂಸುಫ್
|

Updated on: Mar 26, 2025 | 10:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಅಬ್ಬರದೊಂದಿಗೆ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್​ಸಿಬಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆರ್​ಆರ್ ವಿರುದ್ಧ ಎಸ್​ಆರ್​ಹೆಚ್ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಸಿಎಸ್​ಕೆ ಯಶಸ್ವಿಯಾಗಿದೆ. ಹಾಗೆಯೇ ಎಲ್​ಎಸ್​ಜಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಗುಜರಾತ್ ಟೈಟಾನ್ಸ್​ಗೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ.

1 / 7
ಎಲ್ಲಾ ತಂಡಗಳ ಆರಂಭಿಕ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಸೀಸನ್-18ರ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

2 / 7
ಗುಜರಾತ್ ಜೈಂಟ್ಸ್: ಶುಭ್​ಮನ್ ಗಿಲ್ ನಾಯಕತ್ವದ ಗುಜರಾತ್ ಜೈಂಟ್ಸ್ ಸಮೋಲಿತ ತಂಡವಾಗಿದ್ದು, ಹೀಗಾಗಿ ಈ ಬಾರಿ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರದಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ ಜಿಟಿ ಪಡೆ ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ ಮೈಕಲ್ ವಾನ್.

3 / 7
ಮುಂಬೈ ಇಂಡಿಯನ್ಸ್: ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದರೂ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಕೂಡ ಈ ಬಾರಿ ಪ್ಲೇಆಫ್ ಆಡಲಿದೆ ಎಂದು ವಾನ್ ಭವಿಷ್ಯ ನುಡಿದಿದ್ದಾರೆ.

4 / 7
ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಅತ್ಯುತ್ತಮ ಮ್ಯಾಚ್​ ವಿನ್ನರ್​ಗಳನ್ನು ಹೊಂದಿರುವ ಕೆಕೆಆರ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

5 / 7
ಪಂಜಾಬ್ ಕಿಂಗ್ಸ್: ಕಳೆದ ಸೀಸನ್​ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ಸ್ಪೋಟಕ ದಾಂಡಿಗರನ್ನು ಹೊಂದಿದೆ. ಹೀಗಾಗಿ ಈ ಬಾರಿ ಪಂಜಾಬ್ ಪಡೆಯನ್ನು ಕೂಡ ಪ್ಲೇಆಫ್​ನಲ್ಲಿ ನೋಡಬಹುದು ಎಂದು ವಾನ್ ಹೇಳಿದ್ದಾರೆ.

6 / 7
ಅದರಂತೆ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿ ಪ್ಲೇಆಫ್ ಆಡಲಿದೆ ಎಂದು ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ನಾಯಕನ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.

7 / 7
Follow us
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ

Live: ರಕ್ಷಣಾ, ವಿದೇಶಾಂಗ ಸಚಿವಾಲಯ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

ಹೇಗಿದೆ ನೋಡಿ ‘ಭರ್ಜರಿ ಬ್ಯಾಚುಲರ್ಸ್​’ ಹಳ್ಳಿ ಜೀವನ; ಸಾರ್ಥಕತೆಯ ಭಾವನೆ

ಅಮೃತಸರ ಬಳಿ ಪಾಕಿಸ್ತಾನದ ಛಿದ್ರಗೊಂಡ ಡ್ರೋಣ್ ಪತ್ತೆ, ಪರಿಶೀಲನೆ

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?

ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ