IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈಗಾಗಲೇ 10 ತಂಡಗಳು ಮೊದಲ ಪಂದ್ಯವನ್ನಾಡಿದ್ದು, ಇದರಲ್ಲಿ 5 ತಂಡಗಳು ಶುಭಾರಂಭ ಮಾಡಿದರೆ, ಮತ್ತೈದು ತಂಡಗಳು ಸೋಲಿನ ರುಚಿ ನೋಡಿದೆ. ಈ ಸೋಲು-ಗೆಲುವುಗಳ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಲೆಕ್ಕಾಚಾರಗಳು ಕೂಡ ಶುರುವಾಗಿದೆ.
Updated on: Mar 26, 2025 | 10:53 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಅಬ್ಬರದೊಂದಿಗೆ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಆರ್ಸಿಬಿ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆರ್ಆರ್ ವಿರುದ್ಧ ಎಸ್ಆರ್ಹೆಚ್ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಸಿಎಸ್ಕೆ ಯಶಸ್ವಿಯಾಗಿದೆ. ಹಾಗೆಯೇ ಎಲ್ಎಸ್ಜಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ, ಗುಜರಾತ್ ಟೈಟಾನ್ಸ್ಗೆ ಪಂಜಾಬ್ ಕಿಂಗ್ಸ್ ಸೋಲುಣಿಸಿದೆ.

ಎಲ್ಲಾ ತಂಡಗಳ ಆರಂಭಿಕ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಐಪಿಎಲ್ ಸೀಸನ್-18ರ ಲೆಕ್ಕಾಚಾರಗಳು ಕೂಡ ಶುರುವಾಗಿದೆ. ಈ ಲೆಕ್ಕಾಚಾರಗಳ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಈ ಬಾರಿ ಪ್ಲೇಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

ಗುಜರಾತ್ ಜೈಂಟ್ಸ್: ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ಜೈಂಟ್ಸ್ ಸಮೋಲಿತ ತಂಡವಾಗಿದ್ದು, ಹೀಗಾಗಿ ಈ ಬಾರಿ ಅಂಕ ಪಟ್ಟಿಯಲ್ಲಿ ಅಗ್ರ ನಾಲ್ಕರದಲ್ಲಿ ಕಾಣಿಸಿಕೊಳ್ಳಲಿದೆ. ಈ ಮೂಲಕ ಜಿಟಿ ಪಡೆ ಪ್ಲೇಆಫ್ ಹಂತಕ್ಕೇರುವುದು ಖಚಿತ ಎಂದಿದ್ದಾರೆ ಮೈಕಲ್ ವಾನ್.

ಮುಂಬೈ ಇಂಡಿಯನ್ಸ್: ಸಿಎಸ್ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತಿದ್ದರೂ ಮುಂಬೈ ಇಂಡಿಯನ್ಸ್ ಮುಂದಿನ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡುವ ವಿಶ್ವಾಸವಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಮುಂದಾಳತ್ವದ ಮುಂಬೈ ಕೂಡ ಈ ಬಾರಿ ಪ್ಲೇಆಫ್ ಆಡಲಿದೆ ಎಂದು ವಾನ್ ಭವಿಷ್ಯ ನುಡಿದಿದ್ದಾರೆ.

ಕೊಲ್ಕತ್ತಾ ನೈಟ್ ರೈಡರ್ಸ್: ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅದರಲ್ಲೂ ಅತ್ಯುತ್ತಮ ಮ್ಯಾಚ್ ವಿನ್ನರ್ಗಳನ್ನು ಹೊಂದಿರುವ ಕೆಕೆಆರ್ ಕೂಡ ಪ್ಲೇಆಫ್ ಪ್ರವೇಶಿಸಲಿದೆ ಎಂದು ಮೈಕಲ್ ವಾನ್ ಹೇಳಿದ್ದಾರೆ.

ಪಂಜಾಬ್ ಕಿಂಗ್ಸ್: ಕಳೆದ ಸೀಸನ್ನಲ್ಲಿ ಕೆಕೆಆರ್ ತಂಡವನ್ನು ಮುನ್ನಡೆಸಿದ್ದ ಶ್ರೇಯಸ್ ಅಯ್ಯರ್ ಈಗ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ಸ್ಪೋಟಕ ದಾಂಡಿಗರನ್ನು ಹೊಂದಿದೆ. ಹೀಗಾಗಿ ಈ ಬಾರಿ ಪಂಜಾಬ್ ಪಡೆಯನ್ನು ಕೂಡ ಪ್ಲೇಆಫ್ನಲ್ಲಿ ನೋಡಬಹುದು ಎಂದು ವಾನ್ ಹೇಳಿದ್ದಾರೆ.

ಅದರಂತೆ ಗುಜರಾತ್ ಜೈಂಟ್ಸ್, ಮುಂಬೈ ಇಂಡಿಯನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಈ ಬಾರಿ ಪ್ಲೇಆಫ್ ಆಡಲಿದೆ ಎಂದು ಮೈಕಲ್ ವಾನ್ ಭವಿಷ್ಯ ನುಡಿದಿದ್ದಾರೆ. ಇಂಗ್ಲೆಂಡ್ ತಂಡದ ಮಾಜಿ ನಾಯಕನ ಈ ಭವಿಷ್ಯ ನಿಜವಾಗಲಿದೆಯಾ ಕಾದು ನೋಡಬೇಕಿದೆ.



















