AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ಸಿಕ್ಸ್, 11 ಫೋರ್​: ರೆಕಾರ್ಡ್ ಬ್ರೇಕಿಂಗ್ ಸೆಂಚುರಿ ಸಿಡಿಸಿದ ಮಿಚೆಲ್ ಓವನ್

Mitchell Owen Records: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಸ್ಟ್ರೇಲಿಯಾದ ಆಲ್​ರೌಂಡರ್ ಮಿಚೆಲ್ ಓವನ್ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 245 ರನ್​ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Jun 21, 2026 | 10:17 AM

Share
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯಲ್ಲಿ ಮಿಚೆಲ್ ಓವನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಶರವೇಗದ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಓವನ್ ತಮ್ಮದಾಗಿಸಿಕೊಂಡಿದ್ದಾರೆ. (PC: MLC)

1 / 6
ಡಲ್ಲಾಸ್​ನಲ್ಲಿ ನಡೆದ MLC ಟೂರ್ನಿಯ ಐದನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಹಾಗೂ ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್ ಪೂರನ್ ಬೌಲಿಂಗ್ ಆಯ್ದುಕೊಂಡಿದ್ದರು. (PC: MLC)

2 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ವಾಷಿಂಗ್ಟನ್ ಫ್ರೀಡಮ್ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಓವನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ ​ನಿಂದಲೇ ಸಿಡಿಲಬ್ಬರದ ಶುರು ಮಾಡಿದ ಓವನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. (PC: MLC)

3 / 6
ಸಿಕ್ಸ್​-ಫೋರ್​ಗಳ ಸುರಿಮಳೆಯೊಂದಿಗೆ ಮಿಚೆಲ್ ಓವನ್ ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದ ಬಳಿಕ ಕೂಡ ಅಬ್ಬರಿಸಿದ ಓವನ್ 68 ಎಸೆತಗಳಲ್ಲಿ 11 ಫೋರ್ ಹಾಗೂ 13 ಸಿಕ್ಸರ್​ಗಳೊಂದಿಗೆ ಬರೋಬ್ಬರಿ 155 ರನ್​ ಚಚ್ಚಿದರು. ಈ ಮೂಲಕ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡರು. (PC: MLC)

4 / 6
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಫಿಲ್ ಅಲೆನ್ ಹೆಸರಿನಲ್ಲಿತ್ತು. 2025 ರ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಪರ ಕಣಕ್ಕಿಳಿದ ಅಲೆನ್ ಕೇವಲ 51 ಎಸೆತಗಳಲ್ಲಿ 151 ರನ್ ಬಾರಿಸಿದ್ದರು. ಈ ಮೂಲಕ ಎಂಎಲ್​ಸಿ ಟೂರ್ನಿಯಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: MLC)

5 / 6
ಇದೀಗ ಬರೋಬ್ಬರಿ 155 ರನ್ ಬಾರಿಸುವ ಮೂಲಕ ಮಿಚೆಲ್ ಓವನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 150 ಕ್ಕಿಂತ ಹೆಚ್ಚಿನ ಸ್ಕೋರ್​ಗಳಿಸಿದ ವಿಶ್ವದ 18ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: MLC)

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ

ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!

ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ

ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್

ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ

ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?

ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ

ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ