
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯಲ್ಲಿ ಮಿಚೆಲ್ ಓವನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಶರವೇಗದ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಮೊತ್ತ ಕಲೆಹಾಕಿದ ದಾಖಲೆಯನ್ನು ಓವನ್ ತಮ್ಮದಾಗಿಸಿಕೊಂಡಿದ್ದಾರೆ. (PC: MLC)

ಡಲ್ಲಾಸ್ನಲ್ಲಿ ನಡೆದ MLC ಟೂರ್ನಿಯ ಐದನೇ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಮ್ ಹಾಗೂ ಎಂಐ ನ್ಯೂಯಾರ್ಕ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ನ್ಯೂಯಾರ್ಕ್ ತಂಡದ ನಾಯಕ ನಿಕೋಲಸ್ ಪೂರನ್ ಬೌಲಿಂಗ್ ಆಯ್ದುಕೊಂಡಿದ್ದರು. (PC: MLC)

ಅದರಂತೆ ಮೊದಲು ಬ್ಯಾಟ್ ಮಾಡಿದ ವಾಷಿಂಗ್ಟನ್ ಫ್ರೀಡಮ್ ಪರ ಆರಂಭಿಕನಾಗಿ ಕಣಕ್ಕಿಳಿದ ಮಿಚೆಲ್ ಓವನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ ನಿಂದಲೇ ಸಿಡಿಲಬ್ಬರದ ಶುರು ಮಾಡಿದ ಓವನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. (PC: MLC)

ಸಿಕ್ಸ್-ಫೋರ್ಗಳ ಸುರಿಮಳೆಯೊಂದಿಗೆ ಮಿಚೆಲ್ ಓವನ್ ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದ ಬಳಿಕ ಕೂಡ ಅಬ್ಬರಿಸಿದ ಓವನ್ 68 ಎಸೆತಗಳಲ್ಲಿ 11 ಫೋರ್ ಹಾಗೂ 13 ಸಿಕ್ಸರ್ಗಳೊಂದಿಗೆ ಬರೋಬ್ಬರಿ 155 ರನ್ ಚಚ್ಚಿದರು. ಈ ಮೂಲಕ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡರು. (PC: MLC)

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಫಿಲ್ ಅಲೆನ್ ಹೆಸರಿನಲ್ಲಿತ್ತು. 2025 ರ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ಪರ ಕಣಕ್ಕಿಳಿದ ಅಲೆನ್ ಕೇವಲ 51 ಎಸೆತಗಳಲ್ಲಿ 151 ರನ್ ಬಾರಿಸಿದ್ದರು. ಈ ಮೂಲಕ ಎಂಎಲ್ಸಿ ಟೂರ್ನಿಯಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: MLC)

ಇದೀಗ ಬರೋಬ್ಬರಿ 155 ರನ್ ಬಾರಿಸುವ ಮೂಲಕ ಮಿಚೆಲ್ ಓವನ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 150 ಕ್ಕಿಂತ ಹೆಚ್ಚಿನ ಸ್ಕೋರ್ಗಳಿಸಿದ ವಿಶ್ವದ 18ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: MLC)