AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,6,6: ಚೊಚ್ಚಲ ಪಂದ್ಯದಲ್ಲೇ ಯುವ ದಾಂಡಿಗನ ಆರ್ಭಟ

West Indies vs Australia, 1st T20I: ಜಮೈಕಾದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 189 ರನ್ ಕಲೆಹಾಕಿತು. ಈ ಗುರಿಯನ್ನು ಆಸ್ಟ್ರೇಲಿಯಾ ತಂಡ 18.5 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jul 21, 2025 | 9:53 AM

Share
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಸ್ಫೋಟಕ ಯುವ ದಾಂಡಿಗ ಮಿಚೆಲ್ ಓವನ್ (Mitchell Owen). ಜಮೈಕಾದ ಸಬೀನಾ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ಪರ ಆರಂಭಿಕ ದಾಂಡಿಗ ಶಾಯ್ ಹೋಪ್ 39 ಎಸೆತಗಳಲ್ಲಿ 55 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೋಸ್ಟನ್ ಚೇಸ್ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 60 ರನ್​ ಚಚ್ಚಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.

2 / 5
190 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಿಚೆಲ್ ಮಾರ್ಷ್ 17 ಎಸೆತಗಳಲ್ಲಿ 24 ರನ್​ಗಳಿಸಿ ಔಟಾದರೆ, ಜೇಕ್ ಪ್ರೇಸರ್ ಮೆಕ್​ಗುರ್ಕ್​ ಕೇವಲ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ 18 ರನ್​ಗಳಿಸಿ ಪೆವಿಲಿಯನ್​ಗೆ ಹಿಂತಿರುಗಿದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ (11) ಕೂಡ ವಿಕೆಟ್ ಒಪ್ಪಿಸಿದರು.

3 / 5
ಈ ಹಂತದಲ್ಲಿ ಜೊತೆಗೂಡಿದ ಕ್ಯಾಮರೋನ್ ಗ್ರೀನ್ ಹಾಗೂ ಮಿಚೆಲ್ ಓವನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಗ್ರೀನ್ ಅಬ್ಬರಿಸಲಾರಂಭಿಸಿದರೆ, ಮತ್ತೊಂದೆಡೆ ಓವನ್ ತನ್ನ ಸ್ಫೋಟಕ ಬ್ಯಾಟಿಂಗ್​ನ ಝಲಕ್ ತೋರಿಸಿದರು. ಈ ಮೂಲಕ ಕ್ಯಾಮರೋನ್ ಗ್ರೀನ್ 26 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

4 / 5
ಇದಾಗ್ಯೂ ತನ್ನ ಆರ್ಭಟ ಮುಂದುವರೆಸಿದ ಮಿಚೆಲ್ ಓವನ್ 6 ಭರ್ಜರಿ ಸಿಕ್ಸ್​ಗಳೊಂದಿಗೆ 27 ಎಸೆತಗಳಲ್ಲಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಮೂಲಕ 18.5 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಗುರಿ ಮುಟ್ಟಿಸುವಲ್ಲಿ ಓವನ್ ಪ್ರಮುಖ ಪಾತ್ರವಹಿಸಿದರು. ಅಲ್ಲದೆ ಈ ಸ್ಫೋಟಕ ಅರ್ಧಶತಕದೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಪಡೆದರು. ಅಂದಹಾಗೆ 23 ವರ್ಷದ ಮಿಚೆಲ್ ಓವನ್ ಕಳೆದ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಬದಲಿ ಆಟಗಾರನಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಒಂದು ಪಂದ್ಯದಲ್ಲಿ ಮಾತ್ರ ಕಣಕ್ಕಿಳಿದಿದ್ದ ಅವರು ಯಾವುದೇ ರನ್​ಗಳಿಸಲು ಸಾಧ್ಯವಾಗಿರಲಿಲ್ಲ. ಇದಾಗ್ಯೂ ಟಿ20 ಕ್ರಿಕೆಟ್​ನ ಭರವಸೆಯ ಯುವ ದಾಂಡಿಗನಾಗಿ ಓವನ್ ಗುರುತಿಸಿಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ