AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್

ಮಿಚೆಲ್ ಸ್ಟಾರ್ಕ್ ಟೆಸ್ಟ್ ಕ್ರಿಕೆಟ್‌ನಲ್ಲಿ 450 ವಿಕೆಟ್‌ಗಳನ್ನು ಕಬಳಿಸಿದ ಮೊದಲ ಎಡಗೈ ಬೌಲರ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಈ ಮೈಲಿಗಲ್ಲು ತಲುಪಿದ ಅವರು ಆಸ್ಟ್ರೇಲಿಯಾದ ದಿಗ್ಗಜರಾದ ವಾರ್ನ್, ಲಯನ್, ಮೆಕ್‌ಗ್ರಾತ್ ನಂತರ 450 ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. ಸ್ಟಾರ್ಕ್ 109 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದು, ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ.

ಪೃಥ್ವಿಶಂಕರ
|

Updated on: Oct 20, 2026 | 7:34 PM

Share
ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟೆಸ್ಟ್ ಕ್ರಿಕೆಟ್‌ನಲ್ಲಿ 450 ವಿಕೆಟ್‌ಗಳನ್ನು ಕಬಳಿಸಿದ ಮೊದಲ ಎಡಗೈ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಗ್ಕೆಬರ್ಹಾದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನ ವಿಯಾನ್ ಮಲ್ಡರ್ ಅವರನ್ನು ಔಟ್ ಮಾಡುವ ಮೂಲಕ ಸ್ಟಾರ್ಕ್ ಈ ಸಾಧನೆ ಮಾಡಿದರು(PC-PTI).

1 / 5
ಈ ವಿಕೆಟ್‌ನೊಂದಿಗೆ ಸ್ಟಾರ್ಕ್ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್‌ನ ದಿಗ್ಗಜ ಬೌಲರ್‌ಗಳ ಸಾಲಿಗೂ ಸೇರ್ಪಡೆಯಾದರು. ದೇಶದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 450 ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಗೌರವ ಅವರಿಗೆ ಲಭಿಸಿದೆ. ಇದಕ್ಕೂ ಮೊದಲು ದಿಗ್ಗಜ ಲೆಗ್ ಸ್ಪಿನ್ನರ್ ಶೇನ್ ವಾರ್ನ್, ಆಫ್ ಸ್ಪಿನ್ನರ್ ನಾಥನ್ ಲಯನ್ ಮತ್ತು ಮಾಜಿ ವೇಗದ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಈ ಸಾಧನೆ ಮಾಡಿದ್ದರು(PC-PTI).

2 / 5
ಈ ಪಂದ್ಯ ಆರಂಭವಾಗುವ ಮೊದಲು ಮಿಚೆಲ್ ಸ್ಟಾರ್ಕ್‌ಗೆ 450 ವಿಕೆಟ್‌ಗಳ ದಾಖಲೆ ತಲುಪಲು ಕೇವಲ ಎರಡು ವಿಕೆಟ್‌ಗಳ ಅಗತ್ಯವಿತ್ತು. ಮೂರನೇ ದಿನ ಅದ್ಭುತ ಬೌಲಿಂಗ್ ಪ್ರದರ್ಶಿಸಿದ ಅವರು ಈ ಗುರಿಯನ್ನು ಸಾಧಿಸಿದ್ದಾರೆ. ಇದುವರೆಗೆ 109 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಟಾರ್ಕ್, ಸುಮಾರು 26ರ ಸರಾಸರಿಯಲ್ಲಿ 450 ವಿಕೆಟ್‌ಗಳನ್ನು ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ(PC-PTI).

3 / 5
ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಮಿಚೆಲ್ ಸ್ಟಾರ್ಕ್ ಮತ್ತೊಂದು ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಅವರಿಗಿಂತ ಮುಂದೆ ಶೇನ್ ವಾರ್ನ್ (708 ವಿಕೆಟ್), ನಾಥನ್ ಲಯನ್ (573 ವಿಕೆಟ್) ಮತ್ತು ಗ್ಲೆನ್ ಮೆಕ್‌ಗ್ರಾತ್ (563 ವಿಕೆಟ್) ಮಾತ್ರ ಇದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಅತ್ಯಂತ ಯಶಸ್ವಿ ವೇಗದ ಬೌಲರ್‌ಗಳ ಸಾಲಿನಲ್ಲಿ ಸ್ಟಾರ್ಕ್ ತಮ್ಮ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ(PC-PTI).

4 / 5
450 ಟೆಸ್ಟ್ ವಿಕೆಟ್‌ಗಳನ್ನು ಪಡೆಯಲು ಅತ್ಯಂತ ಕಡಿಮೆ ಎಸೆತಗಳನ್ನು ಎಸೆದ ಬೌಲರ್ ಎಂಬ ದಾಖಲೆಯನ್ನೂ ಮಿಚೆಲ್ ಸ್ಟಾರ್ಕ್ ತಮ್ಮದಾಗಿಸಿಕೊಂಡಿದ್ದಾರೆ. ಈ ಐತಿಹಾಸಿಕ ಸಾಧನೆಗಾಗಿ ಅವರು ಕೇವಲ 20,577 ಎಸೆತಗಳನ್ನು ಎಸೆದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ದಿಗ್ಗಜ ವೇಗದ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಅವರ ದಾಖಲೆಯನ್ನು ಮುರಿದಿದ್ದಾರೆ. ಮೆಕ್‌ಗ್ರಾತ್ 450 ಟೆಸ್ಟ್ ವಿಕೆಟ್‌ಗಳನ್ನು ಪಡೆಯಲು 23,474 ಎಸೆತಗಳನ್ನು ಎಸೆದಿದ್ದರು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us