AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 15 ಎಸೆತಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮಿಚೆಲ್ ಸ್ಟಾರ್ಕ್​

West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 225 ರನ್ ಕಲೆಹಾಕಿದರೆ, ವೆಸ್ಟ್ ಇಂಡೀಸ್ ತಂಡವು 143 ರನ್​ಗಳಿಸಿ ಆಲೌಟ್ ಆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 121 ರನ್​ಗಳಿಗೆ ಆಲೌಟ್ ಆಗಿದ್ದರು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 204 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಕೇವಲ 27 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on: Jul 15, 2025 | 10:54 AM

Share
ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕೇವಲ 15 ಎಸೆತಗಳಲ್ಲಿ. ಜಮೈಕಾದ ಸಬೀನಾ ಪಾರ್ಕ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ಕ್​ ಭರ್ಜರಿ ಬೌಲಿಂಗ್ ಸಂಘಟಿಸಿದ್ದರು. ಈ ಭರ್ಜರಿ ಬೌಲಿಂಗ್​ನೊಂದಿಗೆ ವರ್ಲ್ಡ್​ ರೆಕಾರ್ಡ್ ತನ್ನದಾಗಿಸಿಕೊಳ್ಳುವಲ್ಲಿ ಆಸೀಸ್ ವೇಗಿ ಯಶಸ್ವಿಯಾಗಿದ್ದಾರೆ.

1 / 5
ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಮೊದಲ ಓವರ್ ಎಸೆದ ಮಿಚೆಲ್ ಸ್ಟಾರ್ಕ್​ ಯಾವುದೇ ರನ್ ನೀಡದೇ 3 ವಿಕೆಟ್ ಕಬಳಿಸಿದ್ದರು. ಅಲ್ಲದೆ ಮೂರನೇ ಓವರ್​ನಲ್ಲಿ 6 ರನ್ ನೀಡಿ ಮತ್ತೆರಡು ವಿಕೆಟ್​ಗಳನ್ನು ಪಡೆದರು. ಈ ಮೂಲಕ ಕೇವಲ 15 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 5 ವಿಕೆಟ್ ಕಬಳಿಸಿದ ವಿಶ್ವ ದಾಖಲೆ ಸ್ಟಾರ್ಕ್​ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಅಸ್ಟ್ರೇಲಿಯಾದ ಎರ್ನೀ ಟೋಶ್ಯಾಕ್, ಇಂಗ್ಲೆಂಡ್​ನ ಸ್ಟುವರ್ಟ್ ಬ್ರಾಡ್ ಹಾಗೂ ಆಸ್ಟ್ರೇಲಿಯಾದ ಸ್ಕಾಟ್ ಬೋಲ್ಯಾಂಡ್ ಹೆಸರಿನಲ್ಲಿತ್ತು. ಎರ್ನೀ ಟೋಶ್ಯಾಕ್ 1947 ರಲ್ಲಿ ಟೀಮ್ ಇಂಡಿಯಾ ವಿರುದ್ಧ 19 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ್ದರು. ಇನ್ನು ಸ್ಟುವರ್ಟ್ ಬ್ರಾಡ್ 2015 ರಲ್ಲಿ ಆಸ್ಟ್ರೇಲಿಯಾ ವಿರುದ್ಧ 19 ಎಸೆತಗಳಲ್ಲಿ 5 ವಿಕೆಟ್​ಗಳನ್ನು ಉರುಳಿಸಿದ್ದರು. ಇನ್ನು 2021 ರಲ್ಲಿ ಸ್ಕಾಟ್ ಬೋಲ್ಯಾಂಡ್ ಇಂಗ್ಲೆಂಡ್ ವಿರುದ್ಧ 19 ಎಸೆತಗಳಲ್ಲಿ 5 ವಿಕೆಟ್ ಪಡೆದಿದ್ದರು.

3 / 5
ಇದೀಗ ಈ ಮೂವರ ವಿಶ್ವ ದಾಖಲೆಯನ್ನುಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಮಿಚೆಲ್ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ 2.3 ಓವರ್​ಗಳಲ್ಲಿ 5 ವಿಕೆಟ್ ಕಬಳಿಸುವ ಮೂಲಕ, ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಐದು ವಿಕೆಟ್​ಗಳನ್ನು ಉರುಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನು ಸ್ಟಾರ್ಕ್​ ತನ್ನದಾಗಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ 7.3 ಓವರ್​ಗಳಲ್ಲಿ 9 ರನ್ ನೀಡಿ 6 ವಿಕೆಟ್ ಕಬಳಿಸುವ ಮೂಲಕ ಮಿಚೆಲ್ ಸ್ಟಾರ್ಕ್​ ಟೆಸ್ಟ್ ಕ್ರಿಕೆಟ್​ನಲ್ಲಿ 400+ ವಿಕೆಟ್​ಗಳನ್ನು ಸಹ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 2ನೇ ಎಡಗೈ ವೇಗಿ ಎಂಬ ಹೆಗ್ಗಳಿಕೆಯನ್ನು ಸ್ಟಾರ್ಕ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ್ ತಂಡದ ಮಾಜಿ ಎಡಗೈ ವೇಗಿ ವಾಸಿಂ ಅಕ್ರಂ (414) ಈ ಸಾಧನೆ ಮಾಡಿದ್ದರು. ಇದೀಗ 402 ವಿಕೆಟ್​ಗಳೊಂದಿಗೆ ಮಿಚೆಲ್ ಸ್ಟಾರ್ಕ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

5 / 5
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ

ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ

ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್

ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ

ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ

ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ

ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ