Mitchell Starc: ಸ್ಟಾರ್ಕ್ ಸ್ಪಾರ್ಕ್: ಹೊಸ ವಿಶ್ವ ದಾಖಲೆ ಸೃಷ್ಟಿ
T20 World Cup 2024: ವಿಶ್ವಕಪ್ ಇತಿಹಾಸದಲ್ಲೇ ಮೂರಂಕಿ ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಳ್ಳಲು ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ಗೆ ಬೇಕಿರುವುದು ಕೇವಲ ಐದು ವಿಕೆಟ್ಗಳು ಮಾತ್ರ. ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧ ಪಂದ್ಯವಾಡಲಿದ್ದು, ಈ ಮ್ಯಾಚ್ಗಳ ಮೂಲಕ ಸ್ಟಾರ್ಕ್ ಕಡೆಯಿಂದ ಹೊಸ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.
1 / 5
T20 World Cup 2024: ಟಿ20 ವಿಶ್ವಕಪ್ನ 44ನೇ ಪಂದ್ಯದ ಮೂಲಕ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್ಗಳನ್ನು ಎಸೆದಿದ್ದ ಸ್ಟಾರ್ಕ್ ಕೇವಲ 21 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು.
2 / 5
ಈ ಒಂದು ವಿಕೆಟ್ನೊಂದಿಗೆ ಐಸಿಸಿ ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆ ಮಿಚೆಲ್ ಸ್ಟಾರ್ಕ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು.
3 / 5
ಶ್ರೀಲಂಕಾದ ಮಾಜಿ ವೇಗಿ ಲಸಿತ್ ಮಾಲಿಂಗ ಟಿ20+ಏಕದಿನ ವಿಶ್ವಕಪ್ಗಳಲ್ಲಿ 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 94 ವಿಕೆಟ್ ಕಬಳಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು.
4 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾದ ಎಡಗೈ ವೇಗಿ ಸ್ಟಾರ್ಕ್ ಯಶಸ್ವಿಯಾಗಿದ್ದಾರೆ. ಟಿ20+ಏಕದಿನ ವಿಶ್ವಕಪ್ಗಳಲ್ಲಿ ಒಟ್ಟು 52 ಪಂದ್ಯಗಳನ್ನಾಡಿರುವ ಮಿಚೆಲ್ ಸ್ಟಾರ್ಕ್ ಒಟ್ಟು 95 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.
5 / 5
ಇನ್ನು ವಿಶ್ವಕಪ್ನಲ್ಲಿ 100 ವಿಕೆಟ್ಗಳ ಸಾಧನೆ ಮಾಡಲು ಮಿಚೆಲ್ ಸ್ಟಾರ್ಕ್ಗೆ ಬೇಕಿರುವುದು ಕೇವಲ 5 ವಿಕೆಟ್ಗಳು ಮಾತ್ರ. ಆಸ್ಟ್ರೇಲಿಯಾ ತಂಡವು ಟಿ20 ವಿಶ್ವಕಪ್ನ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ವಿರುದ್ಧ ಆಡಬೇಕಿದ್ದು, ಈ ಪಂದ್ಯದ ಮೂಲಕ ಮಿಚೆಲ್ ಸ್ಟಾರ್ಕ್ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.
Published On - 11:02 am, Sat, 22 June 24