AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6,6,6,6,4: ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್

Mitchell Starc: ಟಿ20 ವಿಶ್ವಕಪ್ 2024ರ ಸೆಮಿಫೈನಲ್​ ಪಂದ್ಯದಲ್ಲಿ ರೋಹಿತ್ ಶರ್ಮಾ ಮಿಚೆಲ್ ಸ್ಟಾರ್ಕ್ ಅವರ ಒಂದೇ ಓವರ್​ನಲ್ಲಿ 4 ಸಿಕ್ಸ್ ಹಾಗೂ 1 ಫೋರ್ ಬಾರಿಸಿದ್ದರು. ಅಲ್ಲದೆ ಇದೇ ಓವರ್​ನಲ್ಲಿ ಒಂದು ವೈಡ್ ಕೂಡ ಎಸೆಯುವ ಮೂಲಕ ಸ್ಟಾರ್ಕ್​ 29 ರನ್ ನೀಡಿದ್ದರು. ಇದೀಗ ಏಕದಿನ ಕ್ರಿಕೆಟ್​ನಲ್ಲೂ 28 ರನ್ ನೀಡಿ ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on:Sep 28, 2024 | 11:05 AM

Share
ಟಿ20 ವಿಶ್ವಕಪ್​ ಸೆಮಿಫೈನಲ್ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್​ ಅವರ ಒಂದೇ ಓವರ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ 28 ರನ್​ ಚಚ್ಚಿದ್ದರು. ಅಲ್ಲದೆ ಇದರ ಜೊತೆಗೆ ಒಂದು ವೈಡ್ ಎಸೆಯುವ ಮೂಲಕ ಆಸೀಸ್ ವೇಗಿ 29 ರನ್ ನೀಡಿದ್ದರು. ಇದೀಗ ಇಂಗ್ಲೆಂಡ್​ನ ಸ್ಪೋಟಕ ದಾಂಡಿಗ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಸ್ಟಾರ್ಕ್ ಅವರ ಒಂದೇ ಓವರ್​ನಲ್ಲಿ 4 ಸಿಕ್ಸ್ ಹಾಗೂ 1 ಫೋರ್ ಬಾರಿಸಿದ್ದಾರೆ.

1 / 7
ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಲಿವಿಂಗ್​ಸ್ಟೋನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 27 ಎಸೆತಗಳನ್ನು ಎದುರಿಸಿದ ಲಿವಿಂಗ್​ಸ್ಟೋನ್ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 62 ರನ್​ ಚಚ್ಚಿದ್ದರು. ಈ 62 ರನ್​ಗಳಲ್ಲಿ 28 ರನ್ ಮೂಡಿಬಂದಿರುವುದು ಸ್ಟಾರ್ಕ್​ ಎಸೆದ ಓವರ್​ನಲ್ಲಿ ಎಂಬುದು ವಿಶೇಷ.

2 / 7
ಮಿಚೆಲ್ ಸ್ಟಾರ್ಕ್​ ಎಸೆದ ಈ ಪಂದ್ಯದ 39ನೇ ಓವರ್​ನ ಮೊದಲ ಎಸೆತದಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಭರ್ಜರಿ ಸಿಕ್ಸ್ ಬಾರಿಸಿದ್ದರು. 2ನೇ ಎಸೆತದಲ್ಲಿ ಯಾವುದೇ ರನ್ ಇಲ್ಲ. ಇದಾದ ಬಳಿಕ ಲಿವಿಂಗ್​ಸ್ಟೋನ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಇನ್ನು ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದರು. ಈ ಮೂಲಕ ಮಿಚೆಲ್ ಸ್ಟಾರ್ಕ್​ ಒಂದೇ ಓವರ್​ನಲ್ಲಿ 28 ರನ್ ಬಿಟ್ಟು ಕೊಟ್ಟರು.

3 / 7
ಇದರೊಂದಿಗೆ ಮಿಚೆಲ್ ಸ್ಟಾರ್ಕ್ ಹೆಸರಿಗೆ ಅನಗತ್ಯ ದಾಖಲೆಯೊಂದು ಸೇರ್ಪಡೆಯಾಯಿತು. ಅಂದರೆ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ನೀಡಿದ ಬೌಲರ್ ಎಂಬ ಹಣೆಪಟ್ಟಿ ಇದೀಗ ಸ್ಟಾರ್ಕ್ ಪಾಲಾಗಿದೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಆ್ಯಡಂ ಝಂಪಾ ಹಾಗೂ ಕ್ಯಾಮರೋನ್ ಗ್ರೀನ್ ಹೆಸರಿನಲ್ಲಿತ್ತು.

4 / 7
2023 ರಲ್ಲಿ ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಪಿನ್ನರ್ ಆ್ಯಡಂ ಝಂಪಾ ಒಂದೇ ಓವರ್​ನಲ್ಲಿ 26 ರನ್ ನೀಡಿದ್ದರು. ಇದಾದ ಬಳಿಕ 2023 ರಲ್ಲೇ ಕ್ಯಾಮರೋನ್ ಗೀನ್ ಭಾರತದ ವಿರುದ್ಧ ಪಂದ್ಯದಲ್ಲಿ 26 ರನ್ ಬಿಟ್ಟು ಕೊಟ್ಟು ಈ ಅನಗತ್ಯ ದಾಖಲೆಯನ್ನು ಸರಿಗಟ್ಟಿದ್ದರು.

5 / 7
ಇದೀಗ ಇಂಗ್ಲೆಂಡ್ ವಿರುದ್ಧ 28 ರನ್ ಚಚ್ಚಿಸಿಕೊಳ್ಳುವ ಮೂಲಕ ಮಿಚೆಲ್ ಸ್ಟಾರ್ಕ್ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಅತ್ಯಂತ ಕಳಪೆ ದಾಖಲೆ ಬರೆದಿದ್ದಾರೆ. ಈ ಮೂಲಕ ಏಕದಿನ ಮತ್ತು ಟಿ20 ಕ್ರಿಕೆಟ್​ನಲ್ಲಿ 28 ಅಥವಾ ಅದಕ್ಕಿಂತ ಹೆಚ್ಚು ರನ್ ನೀಡಿದ ಆಸ್ಟ್ರೇಲಿಯಾದ ಮೊದಲ ಬೌಲರ್​ ಎನಿಸಿಕೊಂಡಿದ್ದಾರೆ.

6 / 7
ಇನ್ನು ಮಳೆಯ ಕಾರಣ 39 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡು 312 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 24.4 ಓವರ್​ಗಳಲ್ಲಿ 126 ರನ್​ಗಳಿಸಿ ಆಲೌಟ್ ಆಗಿದೆ. ಇಂಗ್ಲೆಂಡ್ ಪರ ಮ್ಯಾಥ್ಯೂ ಪಾಟ್ಸ್ 4 ವಿಕೆಟ್ ಕಬಳಿಸಿದರೆ, ಜೋಫ್ರಾ ಆರ್ಚರ್ 3 ವಿಕೆಟ್ ಪಡೆದರು. ಇನ್ನು ಬ್ರೈಡನ್ ಕಾರ್ಸ್ 3 ವಿಕೆಟ್ ಕಬಳಿಸಿ ಮಿಂಚಿದರು.

7 / 7

Published On - 11:05 am, Sat, 28 September 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?