AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಎಸೆತದಲ್ಲೇ ವಿಕೆಟ್; ಇತಿಹಾಸ ಸೃಷ್ಟಿಸಿದ ಮಿಚೆಲ್ ಸ್ಟಾರ್ಕ್

Mitchell Starc Breaks Test Cricket Record: ಆಸ್ಟ್ರೇಲಿಯಾ-ಬಾಂಗ್ಲಾದೇಶ ಟೆಸ್ಟ್ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಐತಿಹಾಸಿಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಸ್ಟಾರ್ಕ್ ಪ್ರಥಮ ಸ್ಥಾನಕ್ಕೇರಿದ್ದಾರೆ. ಇದು ಸ್ಟಾರ್ಕ್ ಅವರ ನಾಲ್ಕನೇ ಮೊದಲ ಎಸೆತದ ವಿಕೆಟ್ ಆಗಿದ್ದು, ಈ ಮೂಲಕ ಹಿಂದಿನ ದಾಖಲೆ ಮುರಿದಿದ್ದಾರೆ. ಮೊದಲ ದಿನ 18 ವಿಕೆಟ್‌ಗಳು ಪತನಗೊಂಡಿದ್ದು, ಬಾಂಗ್ಲಾದೇಶ ಕೇವಲ 64 ರನ್‌ಗಳಿಗೆ ಆಲೌಟ್ ಆಗಿದೆ. ಸ್ಟಾರ್ಕ್ 6 ವಿಕೆಟ್ ಕಬಳಿಸಿ ಮಿಂಚಿದರು.

ಪೃಥ್ವಿಶಂಕರ
|

Updated on: Aug 22, 2026 | 7:17 PM

Share
ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಹಾಗೂ ಅಂತಿಮ ಪಂದ್ಯ ಆಗಸ್ಟ್ 22 ರಿಂದ ಪ್ರಾರಂಭವಾಗಿದೆ. ಮೊದಲ ದಿನದಾಟದಲ್ಲೇ ಉಭಯ ತಂಡಗಳ ಒಟ್ಟು 18 ವಿಕೆಟ್​ಗಳು ಪತನಗೊಂಡಿವೆ. ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 64 ರನ್​ಗಳಿಗೆ ಆಲೌಟ್ ಆದರೆ, ಇತ್ತ ಆಸ್ಟ್ರೇಲಿಯಾ ಕೂಡ 8 ವಿಕೆಟ್‌ಗಳನ್ನು ಕಳೆದುಕೊಂಡಿದೆ(PC-PTI).

1 / 6
ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿದ್ದ ಬಾಂಗ್ಲಾದೇಶ ತಂಡವನ್ನು ಎರಡನೇ ಇನ್ನಿಂಗ್ಸ್​ನಲ್ಲಿ ಇಷ್ಟು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ನಿರ್ಣಾಯಕ ಕೊಡುಗೆ ನೀಡಿದರು. ಮೊದಲ ಇನ್ನಿಂಗ್ಸ್​ನಲ್ಲಿ ಸ್ಟಾರ್ಕ್​ ಬರೋಬ್ಬರಿ 6 ವಿಕೆಟ್‌ಗಳನ್ನು ಕಬಳಿಸಿದರು. ಸ್ಟಾರ್ಕ್ ತಮ್ಮ ಪ್ರದರ್ಶನದೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದರು(PC-PTI).

2 / 6
ಪಂದ್ಯದ ಮೊದಲ ಎಸೆತದಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್ ಎನಿಸಿಕೊಂಡರು. ಮೆಕೆ ಟೆಸ್ಟ್‌ನ ಮೊದಲ ಎಸೆತದಲ್ಲೇ ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್‌ಮನ್ ಶಾದ್ಮನ್ ಇಸ್ಲಾಂ ಅವರನ್ನು ಔಟ್ ಮಾಡುವ ಮೂಲಕ ಸ್ಟಾರ್ಕ್ ಈ ಸಾಧನೆ ಮಾಡಿದರು(PC-PTI).

3 / 6
ವಾಸ್ತವವಾಗಿ ಸ್ಟಾರ್ಕ್​ ಇನ್ನಿಂಗ್ಸ್​ನ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಬಾಂಗ್ಲಾದೇಶದ ಆರಂಭಿಕ ಬ್ಯಾಟ್ಸ್‌ಮನ್ ಶಾದ್ಮನ್ ಇಸ್ಲಾಂ ಅವರನ್ನು ಔಟ್ ಮಾಡಿದರು. ಈ ಮೂಲಕ ಸ್ಟಾರ್ಕ್​ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ(PC-PTI).

4 / 6
ಮಿಚೆಲ್ ಸ್ಟಾರ್ಕ್​ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲಿ ವಿಕೆಟ್ ಉರುಳಿಸಿರುವುದು ಇದು ನಾಲ್ಕನೇ ಬಾರಿ. ಈ ಮೂಲಕ ಸ್ಟಾರ್ಕ್​, ಮೂರು ಬಾರಿ ಈ ಸಾಧನೆ ಮಾಡಿದ್ದ ವೆಸ್ಟ್ ಇಂಡೀಸ್‌ನ ಮಾಜಿ ಬೌಲರ್ ಪೆಡ್ರೊ ಕಾಲಿನ್ಸ್ ಅವರನ್ನು ಹಿಂದಿಕ್ಕಿದ್ದಾರೆ(PC-PTI).

5 / 6
ಮಿಚೆಲ್ ಸ್ಟಾರ್ಕ್ ತಮ್ಮ ಮೊದಲ ಎಸೆತದಲ್ಲಿ ಶಾದ್ಮನ್ ಇಸ್ಲಾಂ ಜೊತೆಗೆ ದಿಮುಶ್ ಕರುಣರತ್ನೆ, ರೋರಿ ಬರ್ನ್ಸ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಔಟ್ ಮಾಡಿದ್ದಾರೆ. ಸ್ಟಾರ್ಕ್​ಗೂ ಮೊದಲು ಕಾಲಿನ್ಸ್, ಮೂರು ಸಂದರ್ಭಗಳಲ್ಲಿಯೂ, ಬಾಂಗ್ಲಾದೇಶದ ಮಾಜಿ ಆಟಗಾರ ಹನನ್ ಸರ್ಕಾರ್ ಅವರ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದರು(PC-PTI).

6 / 6
Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್

ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ

'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ

ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ

ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ

ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?

TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!

ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ

TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್

ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ