AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heinrich Klaasen: 7 ಭರ್ಜರಿ ಸಿಕ್ಸ್​: ದಾಖಲೆಯ ಸೆಂಚುರಿ ಸಿಡಿಸಿದ ಕ್ಲಾಸೆನ್..!

MLC 2023: ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದ ಹೆನ್ರಿಕ್ ಕ್ಲಾಸೆನ್ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

TV9 Web
| Edited By: |

Updated on: Jul 26, 2023 | 3:12 PM

Share
MLC 2023: ಯುಎಸ್​ಎನಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್​ ಟೂರ್ನಿಯಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿ ಸೌತ್ ಆಫ್ರಿಕಾ ಆಟಗಾರ ಹೆನ್ರಿಕ್ ಕ್ಲಾಸೆನ್ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 8
ಮೊರಿಸ್​ವಿಲ್ಲೆಯ ಚರ್ಚ್ ಸ್ಟ್ರೀಟ್ ಪಾರ್ಕ್ ​ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ vs ಸಿಯಾಟಲ್ ಓರ್ಕಾಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡದ ಹಂಗಾಮಿ ನಾಯಕ ದುಸನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು.

2 / 8
ಅದರಂತೆ ಮೊದಲು ಬ್ಯಾಟ್ ಮಾಡಿದ ಎಂಐ ನ್ಯೂಯಾರ್ಕ್ ಪರ ನಿಕೋಲಸ್ ಪೂರನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಪೂರನ್ 34 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 68 ರನ್​ ಚಚ್ಚಿದ್ದರು.

3 / 8
ಇನ್ನು ಅಂತಿಮ ಹಂತದಲ್ಲಿ ಟ್ರೆಂಟ್ ಬೌಲ್ಟ್ 6 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್​ನೊಂದಿಗೆ 20 ರನ್ ಕಲೆಹಾಕಿ 20 ಓವರ್​ಗಳಲ್ಲಿ ಎಂಐ ನ್ಯೂಯಾರ್ಕ್​ ತಂಡದ ಮೊತ್ತವನ್ನು 8 ವಿಕೆಟ್ ನಷ್ಟಕ್ಕೆ 194 ಕ್ಕೆ ತಂದು ನಿಲ್ಲಿಸಿದರು.

4 / 8
195 ರನ್​ಗಳ ಕಠಿಣ ಗುರಿ ಪಡೆದ ಸಿಯಾಟಲ್ ಓರ್ಕಾಸ್ ತಂಡಕ್ಕೆ ನೌಮಾನ್ ಅನ್ವರ್ ಉತ್ತಮ ಆರಂಭ ಒದಗಿಸಿದ್ದರು. 30 ಎಸೆತಗಳನ್ನು ಎದುರಿಸಿದ ನೌಮಾನ್ 3 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 50 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

5 / 8
ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಹೆನ್ರಿಕ್ ಕ್ಲಾಸೆನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಅಲ್ಲದೆ ಒಂದು ಹಂತದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಎಂಐ ನ್ಯೂಯಾರ್ಕ್ ಬೌಲರ್​ಗಳ ಬೆಂಡೆತ್ತಿದರು.

6 / 8
ಪರಿಣಾಮ ಕೇವಲ 41 ಎಸೆತಗಳಲ್ಲಿ ಹೆನ್ರಿಕ್ ಕ್ಲಾಸೆನ್ ಶತಕ ಪೂರೈಸಿದರು. ಈ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ  ಕೊನೆಯ ಓವರ್​ಗಳಲ್ಲಿ ಕೇವಲ 7 ರನ್​ಗಳ ಗುರಿ ಪಡೆಯಿತು. ಈ ವೇಳೆ ಭರ್ಜರಿ ಸಿಕ್ಸ್​ ಸಿಡಿಸುವ ಮೂಲಕ ಹೆನ್ರಿಕ್ ಕ್ಲಾಸೆನ್ ಸಿಯಾಟಲ್ ಓರ್ಕಾಸ್ ತಂಡಕ್ಕೆ 2 ವಿಕೆಟ್​ಗಳ ಜಯ ತಂದುಕೊಟ್ಟರು.

7 / 8
44 ಎಸೆತಗಳನ್ನು ಎದುರಿಸಿದ 7 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 110 ರನ್​ ಬಾರಿಸಿದ ಹೆನ್ರಿಕ್ ಕ್ಲಾಸೆನ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಅಲ್ಲದೆ 41 ಎಸೆತಗಳಲ್ಲಿ ಶತಕ ಪೂರೈಸಿ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯಂತ ವೇಗದ ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.

8 / 8
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್