Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್

|

Updated on: Jul 27, 2024 | 9:31 AM

MLC 2024: ಟೆಕ್ಸಾಸ್ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ನ್ಯೂಝಿಲೆಂಡ್ ಕ್ರಿಕೆಟಿಗ ಫಿನ್ ಅಲೆನ್ ಟಿ20 ಕ್ರಿಕೆಟ್​ನಲ್ಲಿ 3500 ರನ್ ಪೂರೈಸಿದ್ದಾರೆ. ಹಾಗೆಯೇ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸೆಂಚುರಿ ಬಾರಿಸಿದ ಕೆಲವೇ ಕೆಲವು ಆಟಗಾರರಲ್ಲಿ ಗುರುತಿಸಿಕೊಂಡಿದ್ದಾರೆ. ಅಂದಹಾಗೆ ಇದೇ ಫಿನ್ ಅಲೆನ್ ಈ ಆರ್​ಸಿಬಿ ತಂಡದಲ್ಲಿದ್ದರು ಎಂಬುದು ವಿಶೇಷ.

1 / 5
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ನ್ಯೂಝಿಲೆಂಡ್​ನ ಫಿನ್ ಅಲೆನ್ (Finn Allen) ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಚಾಲೆಂಜರ್ (ಎಲಿಮಿನೇಟರ್) ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಮತ್ತು ಟೆಕ್ಸಾಸ್ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಟಿಎಸ್​ಕೆ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡಕ್ಕೆ ಆರಂಭಿಕ ಆಟಗಾರ ಫಿನ್ ಅಲೆನ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಅಲೆನ್ ಜೇಕ್ ಫ್ರೇಸರ್ ಮೆಕ್​ಗುರ್ಕ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 7 ಓವರ್​ ಆಗುವಷ್ಟರಲ್ಲಿ ತಂಡದ ಮೊತ್ತ 79 ಕ್ಕೇರಿತು. ಈ ಹಂತದಲ್ಲಿ ಫ್ರೇಸರ್ (18) ಔಟಾದರು.

3 / 5
ಇದಾಗ್ಯೂ ಆರ್ಭಟ ಮುಂದುವರೆಸಿದ ಫಿನ್ ಅಲೆನ್ ಟೆಕ್ಸಾಸ್ ಸೂಪರ್ ಕಿಂಗ್ಸ್ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದ ಅಲೆನ್ 52 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್​ ಹಾಗೂ 6 ಫೋರ್​ಗಳೊಂದಿಗೆ ಸ್ಪೋಟಕ ಶತಕ ಪೂರೈಸಿ ಬ್ಯಾಟ್ ಮೇಲೆತ್ತಿದರು. ಆದರೆ ಶತಕದ ಬೆನ್ನಲ್ಲೇ ಅಲೆನ್ (101) ಕ್ಲೀನ್ ಬೌಲ್ಡ್ ಆಗಿ ಹೊರನಡೆದರು.

4 / 5
ಫಿನ್ ಅಲೆನ್ ಅವರ ಈ ಸ್ಪೋಟಕ ಸೆಂಚುರಿ ನೆರವಿನಿಂದ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು 200 ರನ್​ ಕಲೆಹಾಕಿತು. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಕಠಿಣ ಗುರಿ ನೀಡಿದೆ.

5 / 5
ಅಂದಹಾಗೆ ಫಿನ್ ಅಲೆನ್ ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿದ್ದರು. ಐಪಿಎಲ್​ 2021 ರಿಂದ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಅಲೆನ್ ಅವರನ್ನು ಒಮ್ಮೆಯೂ ಕಣಕ್ಕಿಳಿಸಿರಲಿಲ್ಲ ಎಂಬುದು ವಿಶೇಷ. ಅಂದರೆ ಮೂರು ವರ್ಷಗಳ ಕಾಲ ಫಿನ್ ಅಲೆನ್​ ಆರ್​ಸಿಬಿ ಪರ ಬೆಂಚ್ ಕಾದಿದ್ದರು. ಇದೀಗ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಗಮನ ಸೆಳೆದಿರುವ ಫಿನ್ ಅಲೆನ್ ಮತ್ತೆ ಐಪಿಎಲ್​ಗೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿದ್ದಾರೆ.