AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2025: ಪ್ಲೇಆಫ್ ಸುತ್ತಿಗೆ 4 ತಂಡಗಳ ಎಂಟ್ರಿ: ಇಲ್ಲಿದೆ ವೇಳಾಪಟ್ಟಿ

Major League Cricket 2025: ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ ಮೊದಲ ಸುತ್ತಿನಲ್ಲೇ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಹಾಗೂ ಸಿಯಾಟಲ್ ಓರ್ಕಾಸ್ ತಂಡಗಳು ಹೊರಬಿದ್ದಿದೆ. ಇನ್ನುಳಿದಿರುವ ನಾಲ್ಕು ತಂಡಗಳು ಜುಲೈ 8 ರಿಂದ ಶುರುವಾಗಲಿರುವ ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

ಝಾಹಿರ್ ಯೂಸುಫ್
|

Updated on: Jul 08, 2025 | 9:59 AM

Share
ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ (MLC 2025) ಟೂರ್ನಿಯ ಮೂರನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆರು ತಂಡಗಳೊಂದಿಗೆ ಶುರುವಾದ ಈ ಟೂರ್ನಿಯ ದ್ವಿತೀಯ ಸುತ್ತಿಗೆ 4 ತಂಡಗಳು ಎಂಟ್ರಿ ಕೊಟ್ಟಿದ್ದು , 2 ಟೀಮ್​ಗಳು ಟೂರ್ನಿಯಿಂದ ಹೊರಬಿದ್ದಿದೆ. ಅದರಂತೆ ಈ ಬಾರಿ ಪ್ಲೇಆಫ್ ಆಡಲಿರುವ ನಾಲ್ಕು ತಂಡಗಳು ಈ ಕೆಳಗಿನಂತಿವೆ...

1 / 7
ಈ ಬಾರಿಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ನಾಯಕತ್ವದ ವಾಷಿಂಗ್ಟನ್ ಫ್ರೀಡಂ ತಂಡವು 10 ಮ್ಯಾಚ್​ಗಳಲ್ಲಿ 8 ಗೆಲುವು ದಾಖಲಿಸಿದೆ. ಈ ಮೂಲಕ 16 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

2 / 7
ಫಾಫ್ ಡುಪ್ಲೆಸಿಸ್ ಮುಂದಾಳತ್ವದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಅದ್ಭುತ ಪ್ರದರ್ಶನ ನೀಡಿದ್ದು, 10 ಮ್ಯಾಚ್​ಗಳಲ್ಲಿ 7 ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ.

3 / 7
ಮ್ಯಾಥ್ಯೂ ಶಾರ್ಟ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು 10 ಪಂದ್ಯಗಳಲ್ಲಿ 7 ಜಯ ಸಾಧಿಸಿದೆ. ಇದಾಗ್ಯೂ ನೆಟ್​ ರನ್ ರೇಟ್​ನಲ್ಲಿ ಹಿಂದುಳಿಯುವ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಹೀಗಾಗಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಲಿದೆ.

4 / 7
ಹಾಗೆಯೇ ಮೊದಲ 5 ಪಂದ್ಯಗಳಲ್ಲಿ ಕೇವಲ 1 ಜಯ ಸಾಧಿಸಿದ್ದ ಎಂಐ ನ್ಯೂಯಾರ್ಕ್ ತಂಡವು ಉಳಿದ 5 ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿ ಒಟ್ಟು 6 ಗೆಲುವುಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಎಲಿಮಿನೇಟರ್ ಪಂದ್ಯದಲ್ಲಿ ಕಣಕ್ಕಿಳಿಯಲು ನಿಕೋಲಸ್ ಪೂರನ್ ಪಡೆ ಸಜ್ಜಾಗಿದೆ.

5 / 7
ಜುಲೈ 8 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಹಾಗೂ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

6 / 7
ಇನ್ನು ಜುಲೈ 9 ರಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಎಂಐ ನ್ಯೂಯಾರ್ಕ್ ಹಾಗೂ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್​ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕೂ ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಈ ಮ್ಯಾಚ್​ನಲ್ಲಿ ಗೆದ್ದ ತಂಡ ಹಾಗೂ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡಗಳು ಜುಲೈ 12 ರಂದು ದ್ವಿತೀಯ ಕ್ವಾಲಿಫೈಯರ್​ನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಜುಲೈ 13 ರಂದು ನಡೆಯಲಿರುವ ಫೈನಲ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ.

7 / 7
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!

ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ

ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು RTO ಅಧಿಕಾರಿಗಳೇ ದಂಗು!

KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!

ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ

ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ

ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!

JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​

ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ