AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Moeen Ali: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮೊಯೀನ್ ಅಲಿ ಗುಡ್ ಬೈ

Moeen Ali Retirement: ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ ಮುಂಬರುವ ದಿನಗಳಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂದರಿತಿರುವ ಮೊಯೀನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 08, 2024 | 10:19 AM

Share
ಇಂಗ್ಲೆಂಡ್ ತಂಡದ ಆಲ್​ರೌಂಡರ್ ಮೊಯೀನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಹಿಂದೆ ಟೆಸ್ಟ್ ಮಾದರಿಗೆ ಗುಡ್ ಬೈ ಹೇಳಿದ್ದ ಮೊಯೀನ್ ಅಲಿ, ಇದೀಗ ಏಕದಿನ ಹಾಗೂ ಟಿ20 ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಇದಾಗ್ಯೂ ಅವರು ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

1 / 5
ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪ್ರಕಟಿಸಲಾದ ಇಂಗ್ಲೆಂಡ್ ತಂಡದಲ್ಲಿ ಮೊಯೀನ್ ಅಲಿ ಅವರ ಹೆಸರು ಇರಲಿಲ್ಲ. ಈ ಸರಣಿಯಿಂದ ಇಂಗ್ಲೆಂಡ್ ತಂಡದ ಹಿರಿಯ ಆಟಗಾರರಾದ ಡೇವಿಡ್ ಮಲಾನ್, ಜೋ ರೂಟ್, ಮೊಯೀನ್ ಅಲಿ ಸೇರಿದಂತೆ ಕೆಲವರನ್ನು ಕೈ ಬಿಡಲಾಗಿತ್ತು. ಇದರ ಬೆನ್ನಲ್ಲೇ ಮಲಾನ್ ನಿವೃತ್ತಿ ಘೋಷಿಸಿದ್ದರು. ಇದೀಗ ಮೊಯೀನ್ ಅಲಿ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

2 / 5
ಏಕೆಂದರೆ 37 ವರ್ಷದ ಮೊಯೀನ್ ಅಲಿಗೆ ಮತ್ತೆ ತಂಡದಲ್ಲಿ ಚಾನ್ಸ್ ಸಿಗುವುದು ಅನುಮಾನ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಮುಂಬರುವ ಚಾಂಪಿಯನ್ಸ್ ಟ್ರೋಫಿ, ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಹೊಸ ತಂಡವನ್ನು ಕಟ್ಟುವ ಯೋಜನೆ ರೂಪಿಸಿಕೊಂಡಿದೆ. ಹೀಗಾಗಿಯೇ ಹಿರಿಯ ಆಟಗಾರರನ್ನು ಆಸ್ಟ್ರೇಲಿಯಾ ಸರಣಿಯಿಂದ ಕೈ ಬಿಡಲಾಗಿದೆ. ಇತ್ತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಮೊಯೀನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ.

3 / 5
2014 ರಲ್ಲಿ ಇಂಗ್ಲೆಂಡ್ ಪರ ಪಾದಾರ್ಪಣೆ ಮಾಡಿದ್ದ ಮೊಯೀನ್ ಅಲಿ 68 ಟೆಸ್ಟ್ ಪಂದ್ಯಗಳಿಂದ ಒಟ್ಟು 3094 ರನ್ ಕಲೆಹಾಕಿದ್ದಾರೆ. ಈ ವೇಳೆ 204 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಹಾಗೆಯೇ 138 ಏಕದಿನ ಪಂದ್ಯಗಳಿಂದ 2355 ರನ್ ಹಾಗೂ 111 ವಿಕೆಟ್ ಪಡೆದಿದ್ದಾರೆ.

4 / 5
ಇನ್ನು 92 ಟಿ20 ಪಂದ್ಯಗಳಲ್ಲಿ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದ ಮೊಯೀನ್ ಅಲಿ 1229 ರನ್ ಕಲೆಹಾಕಿದ್ದಾರೆ. ಹಾಗೆಯೇ 51 ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಮೂರು ಸ್ವರೂಪಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಮೊಯೀನ್ ಅಲಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ

‘ಮ್ಯಾಂಗೊ ಪಚ್ಚ’ ಕಟೌಟ್​​ನಲ್ಲಿ ನಟ ದರ್ಶನ್ ಚಿತ್ರ: ಸುದೀಪ್ ಹೇಳಿದ್ದೇನು?

ನೂತನ ಸಿಎಂ ಡಿಕೆ ಶಿವಕುಮಾರ್​​ಗೆ ಶುಭ ಹಾರೈಸಿದ ಲಿಂಗಾಯತ ಸ್ವಾಮೀಜಿಗಳು

ರಾಜೀನಾಮೆ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಹೇಳಿಕೆ

ಕ್ಲಿಯರ್ ಔಟ್ ಆಗಿದ್ದರೂ... ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!

ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡದ್ದಕ್ಕೆ ಕೆಕೆಆರ್​ಟಿಸಿ ಬಸ್ ಜಪ್ತಿ

‘ಮ್ಯಾಂಗೋ ಪಚ್ಚ’ ರಿಲೀಸ್ ಬೆನ್ನಲ್ಲೇ ಕಿಚ್ಚ ಸುದೀಪ್ ಸುದ್ದಿಗೋಷ್ಠಿ

ಕೆಸಿಇಟಿ ಫಲಿತಾಂಶ ಪ್ರಕಟ: ಸಚಿವರ ಸುದ್ದಿಗೋಷ್ಠಿ ನೇರಪ್ರಸಾರ

2 ದಿನಗಳಲ್ಲಿ 33 ವಿಕೆಟ್ ಪತನ: ರೋಚಕ ಘಟ್ಟದತ್ತ 'ಲಾರ್ಡ್ಸ್'​ ಟೆಸ್ಟ್

ಬರ್ತ್ ಡೇ ಪಾರ್ಟಿ ವೇಳೆ ಕುಸಿದು ಬಿದ್ದ ಕಟ್ಟಡ: 15 ಯುವಕರು ಜಸ್ಟ್ ಮಿಸ್