ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ (T20 World Cup 2024) ಶುರುವಾಗಲಿದೆ. ಯುಎಸ್ಎ-ವೆಸ್ಟ್ ಇಂಡೀಸ್ನಲ್ಲಿ ನಡೆಯಲಿರುವ ಈ ಬಾರಿಯ ಟಿ20 ವಿಶ್ವಕಪ್ಗಾಗಿ ಮೇ 1 ರೊಳಗೆ ಎಲ್ಲಾ ದೇಶಗಳು ತಮ್ಮ ತಂಡಗಳನ್ನು ಘೋಷಿಸಬೇಕಿದೆ.
ಇತ್ತ ಐಪಿಎಲ್ನಲ್ಲಿನ ಪ್ರದರ್ಶನವನ್ನು ಪರಿಗಣನೆಗೆ ತೆಗೆದುಕೊಂಡು ಬಲಿಷ್ಠ ಭಾರತ ತಂಡವನ್ನು ಆಯ್ಕೆ ಮಾಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಇದರ ನಡುವೆ ಈ ಬಾರಿಯ ಟಿ20 ವಿಶ್ವಕಪ್ಗಾಗಿ ಟೀಮ್ ಇಂಡಿಯಾ ಹೇಗಿರಬೇಕೆಂದು ತಿಳಿಸಿದ್ದಾರೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್.
ಮುಂಬರುವ ಟಿ20 ವಿಶ್ವಕಪ್ಗಾಗಿ ಮೊಹಮ್ಮದ್ ಕೈಫ್ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಿದ್ದಾರೆ. ವಿಶೇಷ ಎಂದರೆ ಈ ತಂಡದಲ್ಲಿ ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಹಾಗೂ ಶುಭ್ಮನ್ ಗಿಲ್ ಅವರಿಗೆ ಸ್ಥಾನ ಕಲ್ಪಿಸಲಾಗಿಲ್ಲ ಎಂಬುದು ವಿಶೇಷ. ಬದಲಿಗೆ ಶಿವಂ ದುಬೆ ಹಾಗೂ ರಿಯಾನ್ ಪರಾಗ್ ಅವರನ್ನು ಆಯ್ಕೆ ಮಾಡಿದ್ದಾರೆ.
ಹಾಗೆಯೇ ಸ್ಪಿನ್ನರ್ಗಳಾಗಿ ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್ ಹಾಗೂ ಅಕ್ಷರ್ ಪಟೇಲ್ಗೆ ಸ್ಥಾನ ನೀಡಿದ್ದಾರೆ. ವೇಗಿಗಳ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಹಾಗೂ ಅರ್ಷದೀಪ್ ಸಿಂಗ್ ಅವರಿಗೆ ಸ್ಥಾನ ಕಲ್ಪಿಸಲಾಗಿದೆ. ಇನ್ನು ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ಗೆ ಸ್ಥಾನ ನೀಡಿದ್ದಾರೆ. ಅದರಂತೆ ಮೊಹಮ್ಮದ್ ಕೈಫ್ ಆಯ್ಕೆ ಮಾಡಿರುವ ಭಾರತ ಟಿ20 ವಿಶ್ವಕಪ್ ತಂಡ ಈ ಕೆಳಗಿನಂತಿದೆ...
ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಲ್, ಶಿವಂ ದುಬೆ, ರಿಯಾನ್ ಪರಾಗ್, ಮೊಹಮ್ಮದ್ ಸಿರಾಜ್.