ರಾವಲ್ಪಿಂಡಿಯಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮೊಹಮ್ಮದ್ ರಿಝ್ವಾನ್ (Mohammad Rizwan) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ (Virat Kohli) ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಎಂಬುದು ವಿಶೇಷ.
ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಝ್ವಾನ್ 34 ಎಸೆತಗಳಲ್ಲಿ ಅಜೇಯ 45 ರನ್ ಬಾರಿಸಿದರು. ಈ ರನ್ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 3000 ರನ್ ಪೂರೈಸಿದ ಬ್ಯಾಟ್ಸ್ಮನ್ ಎನಿಸಿಕೊಂಡರು.
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹಾಗೂ ಬಾಬರ್ ಆಝಂ ಹೆಸರಿನಲ್ಲಿತ್ತು. ಈ ಇಬ್ಬರು ಆಟಗಾರರು ತಲಾ 81 ಇನಿಂಗ್ಸ್ಗಳ ಮೂಲಕ 3000 ರನ್ ಪೂರೈಸಿ ಟಿ20 ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದರು.
ಇದೀಗ 79 ಇನಿಂಗ್ಸ್ಗಳ ಮೂಲಕ ಮೊಹಮ್ಮದ್ ರಿಝ್ವಾನ್ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಕೊಹ್ಲಿ ಹಾಗೂ ಬಾಬರ್ ಹೆಸರಿನಲ್ಲಿದ್ದ ಟಿ20 ವಿಶ್ವ ದಾಖಲೆಯನ್ನು ಅಳಿಸಿ ಹಾಕಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 18.1 ಓವರ್ಗಳಲ್ಲಿ 90 ರನ್ಗಳಿಸಿ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 12.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.