AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ ರಿಝ್ವಾನ್

T20 World Cup 2024: ನ್ಯೂಯಾರ್ಕ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡ 106 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಪಾಕಿಸ್ತಾನ್ ತಂಡವು 17.3 ಓವರ್​ಗಳಲ್ಲಿ ಗುರಿ ತಲುಪಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 12, 2024 | 2:54 PM

Share
T20 World Cup 2024: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಕೆನಡಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ರಿಝ್ವಾನ್ ಈ ಸಾಧನೆ ಮಾಡಿದ್ದಾರೆ.

1 / 5
ಕೆನಡಾ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಿಝ್ವಾನ್ 52 ಎಸೆತಗಳಲ್ಲಿ 52 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ಓಪನರ್ ಎಂಬ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.

2 / 5
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾ 118 ಬಾರಿ ಇನಿಂಗ್ಸ್ ಆರಂಭಿಸಿದ್ದಾರೆ. ಈ ವೇಳೆ 30 ಬಾರಿ 50+ ಸ್ಕೋರ್​ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ ಕಲೆಹಾಕಿದ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ.

3 / 5
ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ ಯಶಸ್ವಿಯಾಗಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 71 ಇನಿಂಗ್ಸ್​ಗಳಲ್ಲಿ ಪಾಕ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ರಿಝ್ವಾನ್ ಒಟ್ಟು 30 ಬಾರಿ 50+ ಸ್ಕೋರ್​ ಕಲೆಹಾಕಿದ್ದಾರೆ.

4 / 5
ಈ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಎರಡು ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ 50+ ಸ್ಕೋರ್​ಗಳಿಸಿದರೆ ವಿಶ್ವ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತೆ ಅಗ್ರಸ್ಥಾನಕ್ಕೇರಬಹುದು.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?

ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ