T20 World Cup 2024: ರೋಹಿತ್ ಶರ್ಮಾ ದಾಖಲೆ ಸರಿಗಟ್ಟಿದ ರಿಝ್ವಾನ್
T20 World Cup 2024: ನ್ಯೂಯಾರ್ಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡ 106 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಪಾಕಿಸ್ತಾನ್ ತಂಡವು 17.3 ಓವರ್ಗಳಲ್ಲಿ ಗುರಿ ತಲುಪಿ, 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
1 / 5
T20 World Cup 2024: ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ. ನ್ಯೂಯಾರ್ಕ್ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಕೆನಡಾ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸುವ ಮೂಲಕ ರಿಝ್ವಾನ್ ಈ ಸಾಧನೆ ಮಾಡಿದ್ದಾರೆ.
2 / 5
ಕೆನಡಾ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ರಿಝ್ವಾನ್ 52 ಎಸೆತಗಳಲ್ಲಿ 52 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್ಗಳಿಸಿದ ಓಪನರ್ ಎಂಬ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದರು.
3 / 5
ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ 118 ಬಾರಿ ಇನಿಂಗ್ಸ್ ಆರಂಭಿಸಿದ್ದಾರೆ. ಈ ವೇಳೆ 30 ಬಾರಿ 50+ ಸ್ಕೋರ್ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಕಲೆಹಾಕಿದ ಆರಂಭಿಕ ಆಟಗಾರ ಎಂಬ ದಾಖಲೆಯನ್ನು ರೋಹಿತ್ ಶರ್ಮಾ ಬರೆದಿದ್ದಾರೆ.
4 / 5
ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ ಯಶಸ್ವಿಯಾಗಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 71 ಇನಿಂಗ್ಸ್ಗಳಲ್ಲಿ ಪಾಕ್ ಪರ ಆರಂಭಿಕನಾಗಿ ಕಣಕ್ಕಿಳಿದಿರುವ ರಿಝ್ವಾನ್ ಒಟ್ಟು 30 ಬಾರಿ 50+ ಸ್ಕೋರ್ ಕಲೆಹಾಕಿದ್ದಾರೆ.
5 / 5
ಈ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಇನ್ನು ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಲೀಗ್ ಹಂತದಲ್ಲಿ ಎರಡು ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ 50+ ಸ್ಕೋರ್ಗಳಿಸಿದರೆ ವಿಶ್ವ ದಾಖಲೆ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತೆ ಅಗ್ರಸ್ಥಾನಕ್ಕೇರಬಹುದು.