Mohammad Rizwan: ಅರ್ಧಶತಕ ಬಾರಿಸಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಝ್ವಾನ್
T20 World Cup 2024: ಕೆನಾಡ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಜಯ ಸಾಧಿಸಿದೆ. ನ್ಯೂಯಾರ್ಕ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಢಾ ತಂಡ 106 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಅರ್ಧಶತಕ ಬಾರಿಸಿದ್ದರು. ಈ ಹಾಫ್ ಸೆಂಚುರಿ ನೆರವಿನಿಂದ ಪಾಕಿಸ್ತಾನ್ ತಂಡವು 17.3 ಓವರ್ಗಳಲ್ಲಿ ಗುರಿ ತಲುಪಿ, 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Jun 12, 2024 | 9:24 AM

T20 World Cup 2024: ಟಿ20 ವಿಶ್ವಕಪ್ನ 22ನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಪಾಕಿಸ್ತಾನ್ ತಂಡದ ಆರಂಭಿಕ ಆಟಗಾರ ಮುಹಮ್ಮದ್ ರಿಝ್ವಾನ್ (Mohammad Rizwan) ಅರ್ಧಶತಕ ಬಾರಿಸಿದ್ದರು. ವಿಶೇಷ ಎಂದರೆ ಈ ಅರ್ಧಶತಕದೊಂದಿಗೆ ಟಿ20 ವಿಶ್ವಕಪ್ನ ಅತ್ಯಂತ ಕೆಟ್ಟ ದಾಖಲೆಯೊಂದನ್ನು ರಿಝ್ವಾನ್ ತಮ್ಮದಾಗಿಸಿಕೊಂಡಿದ್ದಾರೆ.

ನ್ಯೂಯಾರ್ಕ್ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆನಡಾ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ಪರ ಮುಹಮ್ಮದ್ ರಿಝ್ವಾನ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು.

ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಮುಹಮ್ಮದ್ ರಿಝ್ವಾನ್ ಅರ್ಧಶತಕ ಪೂರೈಸಲು ಬರೋಬ್ಬರಿ 52 ಎಸೆತಗಳನ್ನು ತೆಗೆದುಕೊಂಡಿದ್ದರು. ಇದರೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ನಿಧಾನವಾಗಿ ಹಾಫ್ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಕಳಪೆ ದಾಖಲೆ ರಿಝ್ವಾನ್ ಪಾಲಾಯಿತು.

ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಹೆಸರಿನಲ್ಲಿತ್ತು. 2024ರ ಟಿ20 ವಿಶ್ವಕಪ್ನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಮಿಲ್ಲರ್ 50 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಈ ಅನಗತ್ಯ ದಾಖಲೆ ಬರೆದಿದ್ದರು.

ಇದೀಗ ಕೆನಡಾ ವಿರುದ್ಧ ನಿಧಾನಗತಿಯ ಬ್ಯಾಟಿಂಗ್ನೊಂದಿಗೆ ಮುಹಮ್ಮದ್ ರಿಝ್ವಾನ್ 52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ಹಾಫ್ ಸೆಂಚುರಿ ಸಿಡಿಸಲು ಅತೀ ಹೆಚ್ಚು ಎಸೆತಗಳನ್ನು ತೆಗೆದುಕೊಂಡ ಬ್ಯಾಟರ್ ಎಂಬ ಕಳಪೆ ದಾಖಲೆ ಬರೆದಿದ್ದಾರೆ.
