
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಶುರುವಾಗಿ 4 ದಿನಗಳು ಕಳೆದಿವೆ. ಈ ನಾಲ್ಕು ದಿನಗಳಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ನಾಲ್ಕು ತಂಡಗಳು ಜಯ ಸಾಧಿಸಿದೆ. ಈ ನಾಲ್ಕು ಗೆಲುವುಗಳ ಬೆನ್ನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರ ಮೊಹಮ್ಮದ್ ಶಮಿ ಈ ಬಾರಿ ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ್ದಾರೆ. ಆ ತಂಡಗಳೆಂದರೆ...

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಮೊಹಮ್ಮದ್ ಶಮಿ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಕೂಡ ಉತ್ತಮ ಪ್ರದರ್ಶನ ನೀಡಲಿದ್ದು, ಈ ಮೂಲಕ ಪ್ಲೇಆಫ್ಗೆ ಎಂಟ್ರಿ ಕೊಡಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ (KKR): ಅಜಿಂಕ್ಯ ರಹಾನೆ ನೇತೃತ್ವದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದಲೂ ಈ ಬಾರಿ ಉತ್ತಮ ಪ್ರದರ್ಶನವನ್ನು ಎದುರು ನೋಡಬಹುದು. ಈ ತಂಡ ಕೂಡ ಟಾಪ್-4 ರಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಮೊಹಮ್ಮದ್ ಶಮಿ.

ಪಂಜಾಬ್ ಕಿಂಗ್ಸ್ (PBKS): ಕಳೆದ ಬಾರಿ ಫೈನಲ್ಗೇರಿದ್ದ ಪಂಜಾಬ್ ಕಿಂಗ್ಸ್ ತಂಡದಿಂದಲೂ ಕೂಡ ಈ ಬಾರಿ ಭರ್ಜರಿ ಪ್ರದರ್ಶನವನ್ನು ನಿರೀಕ್ಷಿಸಬಹುದು. ಅದರಂತೆ ಶ್ರೇಯಸ್ ಅಯ್ಯರ್ ಪಡೆಯನ್ನು ಟಾಪ್-4 ನಲ್ಲಿ ಎದುರು ನೋಡಬಹುದು ಎಂದು ಶಮಿ ಹೇಳಿದ್ದಾರೆ.

ಲಕ್ನೋ ಸೂಪರ್ ಜೈಂಟ್ಸ್ (LSG): ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಸಲ ಪ್ಲೇಆಫ್ ಪ್ರವೇಶಿಸುವುದು ಖಚಿತ ಎಂದು ಶಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಮ್ಮ ತಂಡದಲ್ಲಿ ಉತ್ತಮ ಆಟಗಾರರು ಇರುವ ಕಾರಣ ನಾವು ಸಹ ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದ್ದೇವೆ ಎಂದು ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ ಭವಿಷ್ಯ ನುಡಿದಿದ್ದಾರೆ.
Published On - 10:53 am, Wed, 1 April 26