
ರಾಜ್ಕೋಟ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ (Mohammad Siraj) ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು 2ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತ್ತು.

ಅದರಂತೆ ಮೂರನೇ ದಿನದಾಟ ಶುರು ಮಾಡಿದ ಆಂಗ್ಲರನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಅದರಲ್ಲೂ ಕರಾರುವಾಕ್ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 21.1 ಓವರ್ಗಳಲ್ಲಿ 84 ರನ್ ನೀಡಿ 4 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ 319 ರನ್ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ವಿಶೇಷ ಎಂದರೆ ಈ ನಾಲ್ಕು ವಿಕೆಟ್ಗಳೊಂದಿಗೆ ಮೊಹಮ್ಮದ್ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 150 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 33ನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದುವರೆಗೆ ಕೇವಲ 76 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಏಕದಿನ ಕ್ರಿಕೆಟ್ನಲ್ಲಿ 68 ವಿಕೆಟ್, ಟಿ20 ಯಲ್ಲಿ 12 ವಿಕೆಟ್ ಹಾಗೂ ಟೆಸ್ಟ್ ಕ್ರಿಕೆಟ್ನಲ್ಲಿ 78 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಒಟ್ಟು 152 ವಿಕೆಟ್ಗಳ ಸಾಧನೆ ಮಾಡಿದ್ದಾರೆ.

ಮೊಹಮ್ಮದ್ ಸಿರಾಜ್ ಅವರ ಈ ಭರ್ಜರಿ ಬೌಲಿಂಗ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 319 ರನ್ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾನ ಪ್ರಥಮ ಇನಿಂಗ್ಸ್ನಲ್ಲಿ 126 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡಿದೆ.

ಇದೀಗ 126 ರನ್ಗಳ ಮುನ್ನಡೆಯೊಂದಿಗೆ ಭಾರತ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದೆ. ಈ ಮೂಲಕ 3ನೇ ದಿನದಾಟದಲ್ಲೇ ಬೃಹತ್ ಮೊತ್ತ ಪೇರಿಸುವ ಇರಾದೆಯಲ್ಲಿದೆ. ಸದ್ಯದ ಮಟ್ಟಿಗೆ ಈ ಪಂದ್ಯದಲ್ಲಿ ಭಾರತ ತಂಡವು ಮೇಲುಗೈ ಹೊಂದಿದ್ದು, ನಾಲ್ಕನೇ ದಿನದಾಟದ 2ನೇ ಸೆಷನ್ವರೆಗೂ ಟೀಮ್ ಇಂಡಿಯಾ ಬ್ಯಾಟಿಂಗ್ ಮುಂದುವರೆಸುವ ಸಾಧ್ಯತೆ ಹೆಚ್ಚಿದೆ.