
ಏಷ್ಯಾಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಯುಎಇ ನಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದೆ. ಆಗಸ್ಟ್ 28 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ದದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಐಸಿಸಿ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನೆಟ್ ಪ್ರಾಕ್ಟೀಸ್ ನಡೆಸಿತು.

ಇದೇ ವೇಳೆ ಟೀಮ್ ಇಂಡಿಯಾ ಆಟಗಾರರು ಪಾಕಿಸ್ತಾನ್ ಆಟಗಾರರನ್ನು ಭೇಟಿಯಾಗಿದ್ದರು. ಅದರಲ್ಲೂ ಪಾಕ್ ತಂಡದ ನಾಯಕ ಬಾಬರ್ ಹಾಗೂ ವಿರಾಟ್ ಕೊಹ್ಲಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಾಹೀನ್ ಅಫ್ರಿದಿ ಅವರನ್ನು ಭೇಟಿಯಾಗಿದ್ದ ಟೀಮ್ ಇಂಡಿಯಾ ಆಟಗಾರರ ವಿಡಿಯೋವನ್ನು ಕೂಡ ಪಾಕ್ ಕ್ರಿಕೆಟ್ ಮಂಡಳಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿತ್ತು.

ಇದೀಗ ಮತ್ತೊಂದಷ್ಟು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋದಲ್ಲಿರುವುದು ಅಫ್ಘಾನಿಸ್ತಾನ್ ತಂಡದ ನಾಯಕ ಮೊಹಮ್ಮದ್ ನಬಿ ಅವರ ಮಗ ಎಂಬುದು ವಿಶೇಷ.

ಯಎಇನಲ್ಲಿ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿರುವ ನಬಿ ಅವರ ಮಗ ಹಸನ್ ಖಾನ್ ಕೂಡ ಟೀಮ್ ಇಂಡಿಯಾ ಆಟಗಾರರನ್ನು ಭೇಟಿಯಾಗಿದ್ದಾರೆ. ಈ ವೇಳೆ ತೆಗೆದ ಕೆಲ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

16 ವರ್ಷದ ಹಸನ್ ಖಾನ್ ಕ್ರಿಕೆಟಿಗನಾಗಬೇಕೆಂಬ ಕನಸು ಹೊಂದಿದ್ದಾರೆ. ಇನ್ನು ಐಸಿಸಿ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದ ಟೀಮ್ ಇಂಡಿಯಾ ಆಟಗಾರರನ್ನು ಇದೇ ವೇಳೆ ಭೇಟಿಯಾಗಿದ್ದಾರೆ. ಈ ವೇಳೆ ವಿರಾಟ್ ಕೊಹ್ಲಿ ಸೇರಿ ಒಂದಷ್ಟು ಆಟಗಾರರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೆಎಲ್ ರಾಹುಲ್ ಜೊತೆ ಹಸನ್ ಖಾನ್

ರಿಷಭ್ ಪಂತ್ ಜೊತೆ ಹಸನ್ ಖಾನ್