1- ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ದಾಖಲೆ ಮೊಹಮ್ಮದ್ ಶಮಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಝಹೀರ್ ಖಾನ್ ಹಾಗೂ ಜಾವಗಲ್ ಶ್ರೀನಾಥ್ ಹೆಸರಿನಲ್ಲಿತ್ತು. ಶ್ರೀನಾಥ್ ಹಾಗೂ ಝಹೀರ್ ಖಾನ್ ತಲಾ 44 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 45 ವಿಕೆಟ್ ಉರುಳಿಸುವ ಮೂಲಕ ಟೀಮ್ ಇಂಡಿಯಾ ಪರ ಏಕದಿನ ವಿಶ್ವಕಪ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ.