Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 5 ವಿಕೆಟ್​ಗಳ ಗೊಂಚಲು; ಇತಿಹಾಸ ಸೃಷ್ಟಿಸಿದ ಮೊಹಮ್ಮದ್ ಶಮಿ

Mohammed Shami's 5-Wicket Haul: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವೇಗಿ ಮೊಹಮ್ಮದ್ ಶಮಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್‌ಗಳನ್ನು ಪಡೆಯುವ ಮೂಲಕ ದಾಖಲೆ ಕೂಡ ನಿರ್ಮಿಸಿದ್ದಾರೆ. ಗಾಯದಿಂದ ಚೇತರಿಸಿಕೊಂಡು ಮರಳಿದ ಶಮಿ, ಐಸಿಸಿ ಟೂರ್ನಿಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಹೆಚ್ಚು ಬಾರಿ ಸಾಧನೆ ಮಾಡಿದ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಪೃಥ್ವಿಶಂಕರ
|

Updated on: Feb 20, 2025 | 8:20 PM

ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿ ತಮ್ಮ ಮಾರಕ ಬೌಲಿಂಗ್‌ನಿಂದ ಬಾಂಗ್ಲಾದೇಶ ಬ್ಯಾಟಿಂಗ್ ವಿಭಾಗದ ಬೆನ್ನೇಲುಬು ಮುರಿದರು. 2023 ರ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಂತರ ಗಾಯಗೊಂಡಿದ್ದ ಮೊಹಮ್ಮದ್ ಶಮಿ, ಒಂದು ವರ್ಷ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು.

1 / 8
ಈಗ, ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ತಕ್ಷಣ, ಶಮಿ ಮತ್ತೊಮ್ಮೆ ತಮ್ಮ ವೇಗದಿಂದ ಬ್ಯಾಟ್ಸ್‌ಮನ್‌ಗಳನ್ನು ಬೆರಗುಗೊಳಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿಯೇ 5 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಶಮಿ ಎದುರಾಳಿ ತಂಡದಲ್ಲಿ ನಡುಕು ಹುಟ್ಟಿಸಿದ್ದಾರೆ.

2 / 8
2013 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಮೊಹಮ್ಮದ್ ಶಮಿ, ತಮ್ಮ 12 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುತ್ತಿದ್ದಾರೆ. 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತೀಯ ತಂಡದಲ್ಲಿದ್ದರೂ, ಶಮಿಗೆ ಆಡಲು ಅವಕಾಶ ಸಿಗಲಿಲ್ಲ ಆದರೆ ಈ ಬಾರಿ ಅವರು ತಂಡದ ಪ್ರಮುಖ ವೇಗದ ಬೌಲರ್ ಆಗಿ ಕಣಕ್ಕಿಳಿದಿದ್ದು ನಾಯಕನ ನಿರೀಕ್ಷೆಯಂತೆ ಪ್ರದರ್ಶನ ನೀಡಿದ್ದಾರೆ.

3 / 8
ಚಾಂಪಿಯನ್ಸ್ ಟ್ರೋಫಿಯ ಚೊಚ್ಚಲ ಪಂದ್ಯದಲ್ಲಿಯೇ ಶಮಿ ಬಾಂಗ್ಲಾದೇಶ ತಂಡದ ಅರ್ಧದಷ್ಟು ಆಟಗಾರರನ್ನು ಏಕಾಂಗಿಯಾಗಿ ಪೆವಿಲಿಯನ್​ಗಟ್ಟಿ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ನೀಡಿದರು.ಇನ್ನಿಂಗ್ಸ್‌ನ ಮೊದಲ ಓವರ್‌ನಿಂದಲೇ ಶಮಿ ತಮ್ಮ ಪರಾಕ್ರಮವನ್ನು ತೋರಿಸಲು ಪ್ರಾರಂಭಿಸಿದರು. ಓವರ್​ನ ಆರನೇ ಎಸೆತದಲ್ಲಿ ಆರಂಭಿಕ ಸೌಮ್ಯ ಸರ್ಕಾರ್ ಅವರ ವಿಕೆಟ್ ಪಡೆದರು.

4 / 8
 ನಂತರ ಏಳನೇ ಓವರ್‌ನಲ್ಲೂ ಶಮಿ ಬಾಂಗ್ಲಾದೇಶಕ್ಕೆ ಆಘಾತ ನೀಡಿ ಮೆಹದಿ ಹಸನ್ ಮಿರಾಜ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ನಂತರ ಜಾಕಿರ್ ಅಲಿ ಮತ್ತು ತೌಹೀದ್ ಹೃದಯೋಯ್ ನಡುವೆ ಶತಕದ ಪಾಲುದಾರಿಕೆ ಇತ್ತು. ಈ ವೇಳೆ ಟೀಂ ಇಂಡಿಯಾಕ್ಕೆ ವಿಕೆಟ್ ಅಗತ್ಯವಿದ್ದಾಗ, ಶಮಿ ಈ ಕೆಲಸ ಮಾಡಿದರು.

5 / 8
ನಿರ್ಣಾಯಕ ಸಮಯದಲ್ಲಿ ದಾಳಿಗಿಳಿದ ಶಮಿ, ಜಾಕಿರ್ ಅಲಿ ವಿಕೆಟ್ ಪಡೆಯುವ ಮೂಲಕ ತಂಡಕ್ಕೆ ಸಮಾಧಾನ ತಂದುಕೊಟ್ಟರು. ಈ ಮೂಲಕ 200 ಏಕದಿನ ವಿಕೆಟ್‌ಗಳನ್ನು ಸಹ ಪೂರ್ಣಗೊಳಿಸಿದರು. ನಂತರ ಶಮಿ ತಂಜಿಮ್ ಹಸನ್ ಸಕಿಬ್ ಮತ್ತು ತಸ್ಕಿನ್ ಅಹ್ಮದ್ ಅವರ ವಿಕೆಟ್‌ಗಳನ್ನು ಕಬಳಿಸಿ ತಮ್ಮ 5 ವಿಕೆಟ್‌ಗಳನ್ನು ಪೂರ್ಣಗೊಳಿಸಿದರು.

6 / 8
ಇದರೊಂದಿಗೆ, ಶಮಿ ತಮ್ಮ 104 ಏಕದಿನ ಪಂದ್ಯಗಳ ವೃತ್ತಿಜೀವನದಲ್ಲಿ ಆರನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ಗಳನ್ನು ಪಡೆಯುವ ಸಾಧನೆ ಮಾಡಿದ್ದಾರೆ. ವಿಶೇಷವೆಂದರೆ ಶಮಿ ಐಸಿಸಿ ಈವೆಂಟ್‌ಗಳಲ್ಲಿ 5 ಬಾರಿ ಈ ಸಾಧನೆ ಮಾಡಿದ್ದು, ಇದು ವಿಶ್ವ ದಾಖಲೆಯಾಗಿದೆ. ಐಸಿಸಿ ಏಕದಿನ ಟೂರ್ನಿಗಳಲ್ಲಿ ಯಾವುದೇ ಬೌಲರ್ ಒಂದೇ ಇನ್ನಿಂಗ್ಸ್‌ನಲ್ಲಿ ಇಷ್ಟೊಂದು ಬಾರಿ 5 ವಿಕೆಟ್ ಪಡೆದಿಲ್ಲ.

7 / 8
ಇಷ್ಟೇ ಅಲ್ಲ, ಶಮಿ ಕೇವಲ 5126 ಎಸೆತಗಳಲ್ಲಿ 200 ಏಕದಿನ ವಿಕೆಟ್‌ಗಳನ್ನು ಪೂರ್ಣಗೊಳಿಸುವ ಮೂಲಕ ವಿಶ್ವ ದಾಖಲೆಯನ್ನು ಸೃಷ್ಟಿಸಿದರು. ಗಾಯದಿಂದ ಚೇತರಿಸಿಕೊಂಡು ಮರಳುತ್ತಿರುವ ಭಾರತದ ಸ್ಟಾರ್ ವೇಗಿ, ಐಸಿಸಿ ಏಕದಿನ ಟೂರ್ನಿಗಳಲ್ಲಿ ಕೇವಲ 19 ಪಂದ್ಯಗಳಲ್ಲಿ 60 ವಿಕೆಟ್‌ಗಳನ್ನು ಪಡೆಯುವ ಮೂಲಕ ಜಹೀರ್ ಖಾನ್ (59) ಅವರ ದಾಖಲೆಯನ್ನು ಮುರಿದರು.

8 / 8
Follow us
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ

ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ

ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್

ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ

‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್

ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?