ಟೀಮ್ ಇಂಡಿಯಾದಲ್ಲಿ ಮೊಹಮ್ಮದ್ ಶಮಿಗೆ ಸದ್ಯಕ್ಕಿಲ್ಲ ಚಾನ್ಸ್​

Mohammed Shami: ಭಾರತ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದು ವರ್ಷ ಕಳೆದಿದೆ. 2023 ರ ಏಕದಿನ ವಿಶ್ವಕಪ್​​ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿದಿದ್ದ ಶಮಿ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೂ ಅವರಿಗೆ ಭಾರತ ತಂಡದಲ್ಲಿ ಚಾನ್ಸ್ ನೀಡಲಾಗುತ್ತಿಲ್ಲ.

ಝಾಹಿರ್ ಯೂಸುಫ್
|

Updated on: Dec 22, 2024 | 10:08 AM

ಟೀಮ್ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಭಾರತ ತಂಡದಿಂದ ಹೊರಗುಳಿದು ವರ್ಷವೇ ಕಳೆದಿವೆ. 2023 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಕೊನೆಯ ಬಾರಿ ಕಣಕ್ಕಿಳಿದಿದ್ದ ಶಮಿ ಆ ಬಳಿಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಗಾಯಗೊಂಡಿದ್ದು.

1 / 6
ಏಕದಿನ ವಿಶ್ವಕಪ್ 2023 ರ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

2 / 6
ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಸಂಪೂರ್ಣ ಫಿಟ್ ಆಗಿದ್ದಾರೆ.

3 / 6
ಅಲ್ಲದೆ ರಣಜಿ, ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಗಳಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದಾರೆ. ಇದರ ಬೆನ್ನಲ್ಲೇ ಮೊಹಮ್ಮದ್ ಶಮಿ ಅವರು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ತೆರಳಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೀಗ ಮೊಹಮ್ಮದ್ ಶಮಿ ಆಸ್ಟ್ರೇಲಿಯಾಗೆ ತೆರಳುತ್ತಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ ದೇಶೀಯ ಅಂಗಳದಲ್ಲೇ ಮುಂದುವರೆಯಲಿದ್ದಾರೆ.

4 / 6
ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳಲಿದ್ದಾರೆ. ಮುಂಬರುವ ಚಾಂಪಿಯನ್ಸ್ ಟ್ರೋಫಿ ದೃಷ್ಟಿಯಿಂದ ಶಮಿ ಅವರ ಫಿಟ್​ನೆಸ್ ಮೇಲೆ ಕಣ್ಣಿಡಲು ಎನ್​ಸಿಎ ಅಧಿಕಾರಿಗಳಿಗೆ ಬಿಸಿಸಿಐ ಆಯ್ಕೆ ಸಮಿತಿ ಸೂಚಿಸಿದೆ. ಹೀಗಾಗಿ ಮೊಹಮ್ಮದ್ ಶಮಿ ಸದ್ಯಕ್ಕಂತು ಟೀಮ್ ಇಂಡಿಯಾ ಪರ ಕಾಣಿಸಿಕೊಳ್ಳುವುದಿಲ್ಲ.

5 / 6
ಇನ್ನು ಫೆಬ್ರವರಿ 6 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೂಲಕ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಈ ವೇಳೆ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಾಣಿಸಿಕೊಂಡರೆ ಮಾತ್ರ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆಯಾಗಲಿದ್ದಾರೆ. ಹೀಗಾಗಿ ಮೊಹಮ್ಮದ್ ಶಮಿ ಅವರ ಕಂಬ್ಯಾಕ್​ಗಾಗಿ ಇನ್ನೆರಡು ತಿಂಗಳು ಕಾಯಲೇಬೇಕು.

6 / 6
Follow us
ಜಿಟಿಟಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ

ಬಿಗ್​ಬಾಸ್ ಮನೆಯಲ್ಲಿ ರಾಜಿ ಸಂಧಾನ, ದೂರಾದವರು ಒಂದಾದರೇ?

ಮಡಿದವರು ಶಿಗ್ಗಾವಿ ಕ್ಷೇತ್ರದ ಸವಣೂರು ತಾಲ್ಲೂಕಿನ ತರಕಾರಿ ವ್ಯಾಪಾರಸ್ಥರು

ಬಾಗಲಕೋಟೆಯಲ್ಲಿ ಎದೆ ಝಲ್​ ಎನಿಸುವ ಟ್ಯ್ರಾಕ್ಟರ್​ ರೇಸ್​: ವಿಡಿಯೋ ನೋಡಿ

ಬೇರೆ ಪಕ್ಷಗಳ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿಲ್ಲ: ಜಿಟಿ ದೇವೇಗೌಡ

ಶಿಲೆಸಿಕ್ಕ ಜಮೀನಲ್ಲಿ ಭವ್ಯ ರಾಮಮಂದಿರ ನಿರ್ಮಿಸಲು ಸ್ಥಳೀಯರ ಆಗ್ರಹ

ಮೇಲ್ಸೇತುವೆಯಲ್ಲಿ ಚಲಿಸುತ್ತಿದ್ದಾಗ ರೈಲಿನಿಂದ ಕೆಳಗೆ ಜಿಗಿದ ವ್ಯಕ್ತಿ

ಮೈಕ್ರೋ ಫೈನಾನ್ಸ್​ಗಳ ಅಟ್ಟಹಾಸಕ್ಕೆ ಕಡಿವಾಣ ಹಾಕುತ್ತೇವೆ: ಪರಮೇಶ್ವರ್

ಕಳೆದ ತಿಂಗಳು ಕೂಡ ಆಚರಿಸಲಾಗಿತ್ತು ಕಲಬುರಗಿ ಬಂದ್

ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ