AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಐಪಿಎಲ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆ ಬರೆದ ಶಮಿ

Mohammed Shami Record: ಲಕ್ನೋನ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಲಕ್ನೋ ಸೂಪರ್ ಜೈಂಟ್ಸ್ 18.4 ಓವರ್​ಗಳಲ್ಲಿ 141 ರನ್​​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 17.1 ಓವರ್​​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಒಂದು ವಿಕೆಟ್ ಪಡೆದ ಮೊಹಮ್ಮದ್ ಶಮಿ ವಿಶೇಷ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 02, 2026 | 7:35 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ವೇಗಿ ಮೊಹಮ್ಮದ್ ಶಮಿ (Mohammed Shami) ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲೇ ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ.

1 / 6
ಲಕ್ನೋನ ಏಕನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 18.4 ಓವರ್​ಗಳಲ್ಲಿ 141 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಅವರನ್ನು ಮೊಹಮ್ಮದ್ ಶಮಿ ಮೊದಲ ಎಸೆತದಲ್ಲೇ ಔಟ್ ಮಾಡಿದ್ದರು.

2 / 6
ಈ ವಿಕೆಟ್​ನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ ಓವರ್​ನ ಮೊದಲ ಎಸೆತದಲ್ಲಿ 5 ಬಾರಿ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಯನ್ನು ಮೊಹಮ್ಮದ್ ಶಮಿ ತಮ್ಮದಾಗಿಸಿಕೊಂಡಿದ್ದಾರೆ. ಶಮಿ ಈ ಹಿಂದೆ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಜಾಕ್ ಕಾಲಿಸ್ (2014), ಕೆಎಲ್ ರಾಹುಲ್ (2022), ಫಿಲ್ ಸಾಲ್ಟ್ (2023), ಶೇಕ್ ರಶೀದ್ (2025) ಅವರ ವಿಕೆಟ್ ಪಡೆದಿದ್ದರು.

3 / 6
ಇದೀಗ ಕೆಎಲ್ ರಾಹುಲ್ ಅವರನ್ನು ಮತ್ತೊಮ್ಮೆ ಮೊದಲ ಎಸೆತದಲ್ಲೇ ಔಟ್ ಮಾಡುವ ಮೂಲಕ ಐಪಿಎಲ್​ನಲ್ಲಿ 5 ಬಾರಿ ಇನಿಂಗ್ಸ್​ನ ಮೊದಲ ಓವರ್​ನ ಮೊದಲ ಎಸೆತದಲ್ಲಿ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಒಂದೇ ಬ್ಯಾಟರ್​ನ ಎರಡು ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಔಟ್ ಮಾಡಿದ 2ನೇ ವೇಗಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ಸಾಧನೆ ಮಾಡಿದ್ದು ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಲಸಿತ್ ಮಾಲಿಂಗ. 2011 ರಲ್ಲಿ ಮತ್ತು 2015 ರಲ್ಲಿ ಮಯಾಂಕ್ ಅಗರ್ವಾಲ್ ಅವರನ್ನು ಇನಿಂಗ್ಸ್​ನ ಮೊದಲ ಎಸೆತದಲ್ಲೇ ಔಟ್ ಮಾಡಿ ಮಾಲಿಂಗ ಈ ದಾಖಲೆ ಬರೆದಿದ್ದರು. ಇದೀಗ ಕೆಎಲ್ ರಾಹುಲ್ ಅವರನ್ನು ಎರಡು ಬಾರಿ (2022, 2026) ಮೊದಲ ಎಸೆತಗಳಲ್ಲಿ ಔಟ್ ಮಾಡಿ ಮೊಹಮ್ಮದ್ ಶಮಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ 4 ಓವರ್​​ಗಳನ್ನು ಎಸೆದ ಮೊಹಮ್ಮದ್ ಶಮಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು. ಈ ಉತ್ತಮ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.1 ಓವರ್​​ಗಳಲ್ಲಿ 145 ರನ್ ಬಾರಿಸುವ ಮೂಲಕ 6 ವಿಕೆಟ್​​ಗಳ ಜಯ ಸಾಧಿಸಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!

ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ

ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?