AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: 204 ಎಸೆತಗಳನ್ನು ಎಸೆದು ಏಕೈಕ ವಿಕೆಟ್ ಪಡೆದ ಮೊಹಮ್ಮದ್ ಶಮಿ

Mohammed Shami's Disappointing Duleep Trophy Performance: ಏಷ್ಯಾಕಪ್‌ಗೆ ಆಯ್ಕೆಯಾಗದ ಮೊಹಮ್ಮದ್ ಶಮಿ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಸ್ಥಾನ ಪಡೆಯಲು ದುಲೀಪ್ ಟ್ರೋಫಿಯಲ್ಲಿ ಆಡಿದರು. ಆದರೆ ನಿರಾಶಾದಾಯಕ ಪ್ರದರ್ಶನ ನೀಡಿದರು. ಕೇವಲ ಒಂದು ವಿಕೆಟ್ ಪಡೆದರು. ಇದರಿಂದ ವೆಸ್ಟ್ ಇಂಡೀಸ್ ಟೆಸ್ಟ್ ತಂಡದಲ್ಲಿ ಅವರಿಗೆ ಸ್ಥಾನ ಸಿಗುವುದು ಅನುಮಾನ.

ಪೃಥ್ವಿಶಂಕರ
|

Updated on:Aug 31, 2025 | 7:51 PM

Share
ಏಷ್ಯಾಕಪ್​ಗೆ ಭಾರತ ತಂಡವನ್ನು ಆಯ್ಕೆ ಮಾಡಿದಾಗ ಅನುಭವಿ ಮೊಹಮ್ಮದ್ ಶಮಿಗೆ ಸ್ಥಾನ ನೀಡದಿರುವುದು ಅವರ ಅಭಿಮಾನಿಗಳನ್ನು ಕೋಪಗೊಳ್ಳುವಂತೆ ಮಾಡಿತ್ತು. ಆದಾಗ್ಯೂ ಏಷ್ಯಾಕಪ್‌ನಲ್ಲಿ ಅವಕಾಶ ಸಿಗದಿದ್ದರೂ, ಆ ಬಳಿಕ ನಡೆಯಲ್ಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆಯಲು ಮೊಹಮ್ಮದ್ ಶಮಿ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿದಿದ್ದರು.

1 / 6
ಮೊಹಮ್ಮದ್ ಶಮಿ ಅವರ ಅನುಭವವನ್ನು ನೋಡಿದರೆ, ಈ ಟೂರ್ನಿಯಲ್ಲಿ ಅವರಿಂದ ಒಳ್ಳೆಯ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ದುಲೀಪ್ ಟ್ರೋಫಿಯಲ್ಲಿ ಪೂರ್ವ ವಲಯ ತಂಡದ ಪರ ಕಣಕ್ಕಿಳಿದಿದ್ದ ಶಮಿ ನಿರಾಸದಾಯಕ ಪ್ರದರ್ಶನ ನೀಡಿದರು. ತಂಡದ ಪರ ಎರಡೂ ಇನ್ನಿಂಗ್ಸ್​ಗಳಲ್ಲಿ 34 ಓವರ್ ಬೌಲ್ ಮಾಡಿದ ಶಮಿ ಕೇವಲ ಒಂದು ವಿಕೆಟ್ ಮಾತ್ರ ಪಡೆದರು.

2 / 6
ಉತ್ತರ ವಲಯ ತಂಡದ ವಿರುದ್ಧದ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಟ್ಟು 23 ಓವರ್‌ಗಳನ್ನು ಬೌಲ್ ಮಾಡಿದರು, ಅದರಲ್ಲಿ ಅವರು 100 ರನ್‌ಗಳನ್ನು ಬಿಟ್ಟುಕೊಟ್ಟು ಕೇವಲ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಎರಡನೇ ಇನ್ನಿಂಗ್ಸ್‌ನಲ್ಲಿ 11 ಓವರ್‌ ಬೌಲ್ ಮಾಡಿದ ಶಮಿ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗದೆ ಒಟ್ಟು 36 ರನ್‌ಗಳನ್ನು ಬಿಟ್ಟುಕೊಟ್ಟರು.

3 / 6
ಈ ಪಂದ್ಯದಲ್ಲಿ ಶಮಿ ಒಟ್ಟು 34 ಓವರ್‌ಗಳನ್ನು ಬೌಲಿಂಗ್ ಮಾಡುವ ಮೂಲಕ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದರಾದರೂ ತಮ್ಮ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಲು ಸಾಧ್ಯವಾಗಲಿಲ್ಲ. 2025 ರ ಏಷ್ಯಾಕಪ್ ನಂತರ, ಭಾರತ ತಂಡವು ಅಕ್ಟೋಬರ್ 2 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ತವರಿನಲ್ಲಿ ಆಡಬೇಕಾಗಿದೆ. ಶಮಿ ಅವರ ಪ್ರದರ್ಶನವನ್ನು ನೋಡಿದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ.

4 / 6
ಪಂದ್ಯದ ಬಗ್ಗೆ ಹೇಳುವುದಾದರೆ.. ಪೂರ್ವ ವಲಯದ ವಿರುದ್ಧದ ಪಂದ್ಯದಲ್ಲಿ, ಉತ್ತರ ವಲಯವು ಎರಡೂ ಇನ್ನಿಂಗ್ಸ್‌ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ 405 ರನ್‌ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 658 ರನ್‌ಗಳನ್ನು ಬಾರಿಸಿತು. ಆದರೆ ಪೂರ್ವ ವಲಯವು ಈ ಪಂದ್ಯದಲ್ಲಿ ಕೇವಲ ಒಂದು ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯಿತು.

5 / 6
ಇದರಲ್ಲಿ ಕೇವಲ 230 ರನ್‌ಗಳಿಗೆ ಆಲ್ ಔಟ್ ಆಯಿತು. ಈ ರೀತಿಯಾಗಿ, ಮೊದಲ ಇನ್ನಿಂಗ್ಸ್‌ನಲ್ಲಿ ಪಡೆದ ಮುನ್ನಡೆಯ ಆಧಾರದ ಮೇಲೆ ಉತ್ತರ ವಲಯ ತಂಡವು ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈಗ ಸೆಪ್ಟೆಂಬರ್ 4 ರಂದು ನಡೆಯುವ ಸೆಮಿಫೈನಲ್‌ನಲ್ಲಿ ಉತ್ತರ ವಲಯವು ದಕ್ಷಿಣ ವಲಯವನ್ನು ಎದುರಿಸಲಿದೆ.

6 / 6

Published On - 7:51 pm, Sun, 31 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ