ಟೀಮ್ ಇಂಡಿಯಾದಲ್ಲಿ ಸದ್ಯಕ್ಕಿಲ್ಲ ಮೊಹಮ್ಮದ್ ಶಮಿಗೆ ಚಾನ್ಸ್

|

Updated on: Nov 19, 2024 | 8:07 AM

Mohammed Shami: 2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿರುವ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

1 / 5
ರಣಜಿ ಟೂರ್ನಿ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳಿರುವ ಮೊಹಮ್ಮದ್ ಶಮಿ ಸದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

2 / 5
ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಶಮಿ ಇತ್ತೀಚೆಗೆ ನಡೆದ ಮಧ್ಯಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಈ ಪಂದ್ಯದಲ್ಲಿ ಬಂಗಾಳ ಪರ ಕಣಕ್ಕಿಳಿದಿದ್ದ ಶಮಿ ಒಟ್ಟು 7 ವಿಕೆಟ್ ಕಬಳಿಸಿ ಮಿಂಚಿದ್ದರು.

3 / 5
ಈ ಮೂಲಕ ತಮ್ಮ ಫಿಟ್​ನೆಸ್ ಹಾಗೂ ಕಾರ್ಯಕ್ಷಮತೆಯನ್ನು ಪ್ರದರ್ಶಿಸಿದ್ದ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ವರದಿಗಳಾಗಿದ್ದವು. ಆದರೀಗ ಇನ್ನೊಂದಷ್ಟು ಪಂದ್ಯಗಳನ್ನಾಡುವಂತೆ ಬಿಸಿಸಿಐ ಮೊಹಮ್ಮದ್ ಶಮಿಗೆ ಸೂಚಿಸಿದೆ. ಅದರಂತೆ ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶಮಿ ಬಂಗಾಳ ಪರ ಕಣಕ್ಕಿಳಿಯಲಿದ್ದಾರೆ.

4 / 5
ಹೀಗಾಗಿ ಮೊಹಮ್ಮದ್ ಶಮಿ ಅವರು ಮತ್ತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಮತ್ತಷ್ಟು ವಿಳಂಬವಾಗುವುದು ಖಚಿತವಾಗಿದೆ. ಇನ್ನು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಪರಿಗಣಿಸಬಹುದು. ಅದರಂತೆ ಅವರು ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

5 / 5
2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಅಲ್ಲದೆ ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಅವರು ಒಂದು ವರ್ಷಗಳ ಕಾಲ ಯಾವುದೇ ಸ್ಪರ್ಧಾತ್ಮಕ ಪಂದ್ಯವಾಡಿರಲಿಲ್ಲ. ಇದೀಗ ರಣಜಿ ಟೂರ್ನಿಯ ಮೂಲಕ ಕಂಬ್ಯಾಕ್ ಮಾಡಿರುವ ಶಮಿ, ಮುಂಬರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲೂ ಕಾಣಿಸಿಕೊಳ್ಳಲಿದ್ದಾರೆ.

Published On - 8:06 am, Tue, 19 November 24