AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ್ ಕುಮಾರ್ ಅವರಂತೆ ಮೊಹಮ್ಮದ್ ಶಮಿ ಕಂಬ್ಯಾಕ್ ಯಾವಾಗ?

ಭುವನೇಶ್ವರ್ ಕುಮಾರ್ ಅವರ ಯಶಸ್ವಿ ಕಂಬ್ಯಾಕ್ ನಂತರ, ಮೊಹಮ್ಮದ್ ಶಮಿ ಟೀಂ ಇಂಡಿಯಾಕ್ಕೆ ಮರಳುವ ನಿರೀಕ್ಷೆ ಹೆಚ್ಚಿದೆ. ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನವಿದ್ದರೂ, ಶಮಿ ದೇಶೀಯ ಕ್ರಿಕೆಟ್‌ನಲ್ಲಿ ಅದ್ಭುತವಾಗಿ ಮಿಂಚಿದ್ದಾರೆ. ಬಂಗಾಳ ಕೋಚ್ ಲಕ್ಷ್ಮಿ ರತ್ನ ಶುಕ್ಲಾ, ಶಮಿ ಅವರ ಕಂಬ್ಯಾಕ್ ಖಚಿತ ಎಂದು ಹೇಳಿದ್ದು, ರಣಜಿ ಟ್ರೋಫಿ ಪ್ರದರ್ಶನವು ಅವರಿಗೆ ಅವಕಾಶ ತಂದುಕೊಡಬಹುದು.

ಪೃಥ್ವಿಶಂಕರ
|

Updated on: Oct 07, 2026 | 9:24 PM

Share
ಶ್ರಮಕ್ಕೆ ಸರಿಯಾದ ಪ್ರತಿಫಲ ಸಿಕ್ಕೆ ಸಿಗುತ್ತದೆ ಎಂಬುದಕ್ಕೆ ಭುವನೇಶ್ವರ್ ಕುಮಾರ್ ತಾಜಾ ಉದಾಹರಣೆಯಾಗಿದ್ದಾರೆ. ಟೀಂ ಇಂಡಿಯಾದಿಂದ ಹೊರಬಿದ್ದರೂ ಛಲ ಬಿಡದ ಭುವಿ 4 ವರ್ಷಗಳ ಬಳಿಕ ತಂಡಕ್ಕೆ ಮರಳಿದ್ದಾರೆ. ಭುವನೇಶ್ವರ್ ಆಗಮನದ ಬಳಿಕ ಅಭಿಮಾನಿಗಳಿಂದ ಮತ್ತೊಂದು ಕೂಗು ಜೋರಾಗಿದೆ. ಅದೇನೆಂದರೆ ಮೊಹಮ್ಮದ್ ಶಮಿಗೆ ಮತ್ತೊಂದು ಅವಕಾಶ ಯಾವಾಗ ಎಂಬುದು(PC-PTI).

1 / 5
ಭುವನೇಶ್ವರ್ ಕುಮಾರ್ ಅವರಂತೆಯೇ ಮೊಹಮ್ಮದ್ ಶಮಿ ಕೂಡ ಮತ್ತೆ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದಾಗ್ಯೂ ಅವರ ಮೇಲೆ ಬಿಸಿಸಿಐ ಕರುಣೆ ತೋರುತ್ತಿಲ್ಲ. ಆದರೀಗ ಭುವನೇಶ್ವರ್​ಗೆ ಅವಕಾಶ ಸಿಕ್ಕ ಬಳಿಕ, ಮೊಹಮ್ಮದ್ ಶಮಿ ಕೂಡ ತಂಡದಲ್ಲಿ ಆಡುವ ದಿನಗಳು ದೂರವಿಲ್ಲ ಎಂಬ ಅಭಿಪ್ರಾಯವನ್ನು ಬಂಗಾಳದ ತಂಡದ ಕೋಚ್ ಲಕ್ಷ್ಮಿ ರತ್ನ ಶುಕ್ಲಾ ಹಂಚಿಕೊಂಡಿದ್ದಾರೆ(PC-PTI).

2 / 5
ಈ ಬಗ್ಗೆ ಮಾತನಾಡಿರುವ ಬಂಗಾಳದ ತಂಡದ ಕೋಚ್  ಲಕ್ಷ್ಮಿ ರತ್ನ ಶುಕ್ಲಾ,‘ ಶಮಿ ಒಬ್ಬ ಅತ್ಯುತ್ತಮ ಆಟಗಾರ. ಅವರು ಡ್ರೆಸ್ಸಿಂಗ್ ರೂಮ್‌ನಲ್ಲಿರುವ ಎಲ್ಲರಿಗೂ ಪ್ರೇರಣೆ ನೀಡುತ್ತಾರೆ. ಮುಂಬರುವ ರಣಜಿ ಟ್ರೋಫಿಯಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಬಲವಾದ ಪುನರಾಗಮನ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ(PC-PTI).

3 / 5
ಆದಾಗ್ಯೂ, ಕಳೆದ ಎರಡು ವರ್ಷಗಳಲ್ಲಿ ಐಪಿಎಲ್‌ನಲ್ಲಿ ಅವರ ಪ್ರದರ್ಶನ ಕಳಪೆಯಾಗಿರುವುದರಿಂದ ಶಮಿ ಅವರ ಪುನರಾಗಮನದ ಸಾಧ್ಯತೆಗಳು ಕಡಿಮೆ ಎಂಬುದು ನಿಜ. ಆದರೆ ದೇಶೀಯ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದ್ದಾರೆ. 2025-26ರ ರಣಜಿಯಲ್ಲಿ ಬಂಗಾಳ ತಂಡ ಸೆಮಿಫೈನಲ್ ತಲುಪುವಲ್ಲಿ ಶಮಿ ಪ್ರಮುಖ ಪಾತ್ರವಹಿಸಿದ್ದರು(PC-PTI).

4 / 5
ಆ ಸೀಸನ್​ನಲ್ಲಿ ಶಮಿ ಆಡಿದ ಏಳು ಪಂದ್ಯಗಳಲ್ಲಿ 37 ವಿಕೆಟ್‌ಗಳನ್ನು ಪಡೆದಿದ್ದರು. ಹಾಗೆಯೇ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ 15 ವಿಕೆಟ್‌ಗಳನ್ನು ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡಿದ ಏಳು ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ ಐಪಿಎಲ್‌ನಲ್ಲಿ ಅವರ ಪ್ರದರ್ಶನ ಹೆಚ್ಚು ಪರಿಣಾಮಕಾರಿಯಾಗಿಲ್ಲ. ಹೀಗಾಗಿ ಅವರ ಆಯ್ಕೆಯ ಸಾಧ್ಯತೆಗಳು ದಟ್ಟವಾಗಿವೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ