- Kannada News Photo gallery Cricket photos Mohammed Shami likely to miss first 2 Tests against England
Team India: ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್..!
India vs England Test 2024: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್ಕೋಟ್ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ.
Updated on:Jan 08, 2024 | 8:51 AM

ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

ಸದ್ಯ ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್ಕೋಟ್ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್ಕೋಟ್ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.
Published On - 8:51 am, Mon, 8 January 24



















