Team India: ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್..!

| Updated By: ಝಾಹಿರ್ ಯೂಸುಫ್

Updated on: Jan 08, 2024 | 8:51 AM

India vs England Test 2024: ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ.

1 / 5
ಇಂಗ್ಲೆಂಡ್​ ವಿರುದ್ಧದ ಪ್ರತಿಷ್ಠಿತ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ಭಾರತ ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಏಕದಿನ ವಿಶ್ವಕಪ್​ ವೇಳೆ ಪಾದದ ನೋವಿಗೆ ಒಳಗಾಗಿದ್ದ ಶಮಿ ಇನ್ನೂ ಕೂಡ ಬೌಲಿಂಗ್ ಅಭ್ಯಾಸ ಆರಂಭಿಸಿಲ್ಲ.

2 / 5
ಸದ್ಯ ಫಿಟ್​ನೆಸ್​ ಸಮಸ್ಯೆಯಿಂದ ಬಳಲುತ್ತಿರುವ ಅವರು ಜನವರಿ 25 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಇನ್ನು ಮೂರನೇ ಪಂದ್ಯದ ವೇಳೆಗೆ ಶಮಿ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

3 / 5
ಆದರೆ ಅದಕ್ಕೂ ಮುನ್ನ ಮೊಹಮ್ಮದ್ ಶಮಿ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕು. ಇದಾದ ಬಳಿಕವಷ್ಟೇ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂದಿನ 2 ವಾರಗಳಲ್ಲಿ ಶಮಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದು ನಿರ್ಧಾರವಾಗಲಿದೆ.

4 / 5
ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜನವರಿ 25 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಹೈದರಾಬಾದ್​ನಲ್ಲಿ ನಡೆದರೆ, ಫೆಬ್ರವರಿ 2 ರಿಂದ ಶುರುವಾಗಲಿರುವ 2ನೇ ಪಂದ್ಯಕ್ಕೆ ವಿಶಾಖಪಟ್ಟಣಂ ಆತಿಥ್ಯವಹಿಸಲಿದೆ. ಇನ್ನು ಫೆಬ್ರವರಿ 15 ರಿಂದ ರಾಜ್​ಕೋಟ್​ನಲ್ಲಿ 3ನೇ ಪಂದ್ಯ ನಡೆಯಲಿದ್ದು, 4ನೇ ಪಂದ್ಯವು ಫೆಬ್ರವರಿ 23 ರಿಂದ ರಾಜ್​ಕೋಟ್​ನಲ್ಲಿ ಜರುಗಲಿದೆ. ಇನ್ನು 5ನೇ ಟೆಸ್ಟ್ ಪಂದ್ಯವು ಮಾರ್ಚ್ 7 ರಿಂದ ಶುರುವಾಗಲಿದ್ದು, ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

5 / 5
ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಇಂಗ್ಲೆಂಡ್ ತಂಡ:  ಬೆನ್ ಸ್ಟೋಕ್ಸ್ (ನಾಯಕ), ರೆಹಾನ್ ಅಹ್ಮದ್, ಜೇಮ್ಸ್ ಅ್ಯಂರ್ಸನ್, ಗಸ್ ಅಟ್ಕಿನ್ಸನ್ , ಜಾನಿ ಬೈರ್‌ಸ್ಟೋವ್, ಶೋಯೆಬ್ ಬಶೀರ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್, ಟಾಮ್ ಹಾರ್ಟ್ಲಿ, ಜ್ಯಾಕ್ ಲೀಚ್, ಒಲ್ಲಿ ಪೋಪ್, ಆಲಿ ರಾಬಿನ್ಸನ್ , ಜೋ ರೂಟ್ , ಮಾರ್ಕ್ ವುಡ್.

Published On - 8:51 am, Mon, 8 January 24