ಬರೋಬ್ಬರಿ 790 ದಿನಗಳ ಬಳಿಕ ಮೊಹಮ್ಮದ್ ಶಮಿ ಅಚ್ಚರಿಯ ಆಯ್ಕೆ..!
TV9 Web | Updated By: ಝಾಹಿರ್ ಯೂಸುಫ್
Updated on:
Jan 12, 2025 | 7:53 AM
India T20 Squad: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡಕ್ಕೆ ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆ ಪ್ರಮುಖ ವೇಗಿಯಾಗಿ ಮೊಹಮ್ಮದ್ ಶಮಿ ಅವರನ್ನು ಸಹ ತಂಡಕ್ಕೆ ಆಯ್ಕೆ ಮಾಡಲಾಗಿದೆ.
1 / 7
ಭಾರತ ಟಿ20 ತಂಡಕ್ಕೆ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಿದ್ದಾರೆ. ಅದು ಕೂಡ ಬರೋಬ್ಬರಿ 790 ದಿನಗಳ ದಿನಗಳ ಬಳಿಕ ಎಂಬುದೇ ಅಚ್ಚರಿ. ಅಂದರೆ ಮೊಹಮ್ಮದ್ ಶಮಿ ಕೊನೆಯ ಬಾರಿ ಟೀಮ್ ಇಂಡಿಯಾ ಪರ ಟಿ20 ಪಂದ್ಯವಾಡಿದ್ದು 2022 ರಲ್ಲಿ. ಇದೀಗ 2 ವರ್ಷಗಳ ಬಳಿಕ ಮತ್ತೆ ಅವರಿಗೆ ಭಾರತ ಟಿ20 ತಂಡದಲ್ಲಿ ಸ್ಥಾನ ನೀಡಿರುವುದೇ ಅಚ್ಚರಿ.
2 / 7
ಏಕೆಂದರೆ ಮೊಹಮ್ಮದ್ ಶಮಿ ಅವರು 2022 ರ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದ ಬಳಿಕ ಟೀಮ್ ಇಂಡಿಯಾ ಪರ ಒಂದೇ ಒಂದು ಟಿ20 ಪಂದ್ಯವಾಡಿಲ್ಲ. ಅಡಿಲೇಡ್ನಲ್ಲಿ ನಡೆದ ಟಿ20 ವಿಶ್ವಕಪ್ನ ಸೆಮಿಫೈನಲ್ನಲ್ಲಿ 3 ಓವರ್ಗಳನ್ನು ಎಸೆದಿದ್ದ ಶಮಿ 39 ರನ್ ನೀಡಿ ದುಬಾರಿಯಾಗಿದ್ದರು.
3 / 7
ಈ ಕಳಪೆ ಪ್ರದರ್ಶನದ ಬಳಿಕ ಅವರನ್ನು ಟಿ20 ತಂಡದ ಆಯ್ಕೆಗೆ ಪರಿಗಣಿಸಿರಲಿಲ್ಲ. ಅಲ್ಲದೆ ಏಕದಿನ ಮತ್ತು ಟೆಸ್ಟ್ ತಂಡಗಳಲ್ಲಿ ಮಾತ್ರ ಸ್ಥಾನ ನೀಡಲಾಗುತ್ತಿತ್ತು. ಆದರೀಗ 790 ದಿನಗಳ ಬಳಿಕ ಮೊಹಮ್ಮದ್ ಶಮಿ ಅವರನ್ನು ಟಿ20 ತಂಡಕ್ಕೆ ಕರೆತರಲಾಗಿದೆ.
4 / 7
ಇದಕ್ಕೆ ಮುಖ್ಯ ಕಾರಣ ಮೊಹಮ್ಮದ್ ಶಮಿ ಅವರ ಕಾರ್ಯಕ್ಷಮತೆಯ ಪರೀಕ್ಷೆ. ಅಂದರೆ 2023ರ ಏಕದಿನ ವಿಶ್ವಕಪ್ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ. ಇದೀಗ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಶಮಿ ಅವರ ಅವಶ್ಯಕತೆ ಟೀಮ್ ಇಂಡಿಯಾಗೆ ಇದೆ.
5 / 7
ಆದರೆ ಅದಕ್ಕೂ ಮುನ್ನ ಅವರ ಕಾರ್ಯಕ್ಷಮತೆಯನ್ನು ಪರೀಕ್ಷಿಸಲು ಆಯ್ಕೆ ಸಮಿತಿ ನಿರ್ಧರಿಸಿದೆ. ಇದಕ್ಕಾಗಿಯೇ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಶಮಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಈ ಸರಣಿಯಲ್ಲಿ ಅವರು ಫಿಟ್ನೆಸ್ನೊಂದಿಗೆ ಸಂಪೂರ್ಣ ಓವರ್ಗಳನ್ನು ಎಸೆಯಲು ಯಶಸ್ವಿಯಾದರೆ, ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಲಿದ್ದಾರೆ.
6 / 7
ಇನ್ನು ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಂಡರೆ, ಚಾಂಪಿಯನ್ಸ್ ಟ್ರೋಫಿ ತಂಡದಲ್ಲೂ ಅವರಿಗೆ ಸ್ಥಾನ ಸಿಗಲಿದೆ. ಹಾಗಾಗಿ ಮುಂಬರುವ 5 ಪಂದ್ಯಗಳ ಟಿ20 ಸರಣಿಯು ಶಮಿ ಪಾಲಿಗೆ ಅಗ್ನಿಪರೀಕ್ಷೆ ಎಂದರೆ ತಪ್ಪಾಗಲಾರದು.
7 / 7
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).