ಶಮಿ ಸಂಚಲನ: ಕಂಬ್ಯಾಕ್ ಪಂದ್ಯದಲ್ಲೇ ಮಿಂಚಿಂಗ್

Mohammed Shami: 2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ವಿಶ್ವಕಪ್​ ಬಳಿಕ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಗುಣಮುಖರಾಗಿರುವ ಮೊಹಮ್ಮದ್ ಶಮಿ ಒಂದು ವರ್ಷದ ಬಳಿಕ ಮತ್ತೆ ಮೈದಾನಕ್ಕಿಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 14, 2024 | 1:54 PM

ಪ್ರಸ್ತುತ ನಡೆಯುತ್ತಿರುವ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಕಣಕ್ಕಿಳಿದಿರುವ ಮೊಹಮ್ಮದ್ ಶಮಿ ಕಂಬ್ಯಾಕ್ ಪಂದ್ಯದಲ್ಲೇ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇಂದೋರ್​ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಬಂಗಾಳ ಹಾಗೂ ಮಧ್ಯ ಪ್ರದೇಶ್ ತಂಡಗಳು ಮುಖಾಮುಖಿಯಾಗಿವೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಂಗಾಳ ತಂಡವು ಮೊದಲ ಇನಿಂಗ್ಸ್​ನಲ್ಲಿ 228 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ತಂಡದ ಬ್ಯಾಟಿಂಗ್ ಬೆನ್ನಲುಬು ಮುರಿಯುವಲ್ಲಿ ಮೊಹಮ್ಮದ್ ಶಮಿ ಯಶಸ್ವಿಯಾದರು.

2 / 5
ಮಧ್ಯ ಪ್ರದೇಶ್ ತಂಡದ ನಾಯಕ ಶುಭಮ್ ಶರ್ಮಾ (8) ಅವರನ್ನು ಔಟ್ ಮಾಡಿ ವಿಕೆಟ್ ಖಾತೆ ತೆರೆದ ಮೊಹಮ್ಮದ್ ಶಮಿ ಆ ಬಳಿಕ ಮೂರು ವಿಕೆಟ್ ಕಬಳಿಸಿದರು. ಈ ಮೂಲಕ ಮಧ್ಯ ಪ್ರದೇಶ್ ತಂಡವನ್ನು ಕೇವಲ 167 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

3 / 5
ಇನ್ನು ಈ ಪಂದ್ಯದಲ್ಲಿ 19 ಓವರ್​ಗಳನ್ನು ಎಸೆದಿರುವ ಮೊಹಮ್ಮದ್ ಶಮಿ 54 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಶಮಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದಂತಾಗಿದೆ. ಅಲ್ಲದೆ ಇನ್ನೊಂದೆರಡು ಪಂದ್ಯಗಳಲ್ಲಿ ಕಣಕ್ಕಿಳಿದರೆ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಪರಿಗಣಿಸಬಹುದು.

4 / 5
ಇದಕ್ಕೂ ಮುನ್ನ ಶಮಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಗಾಯದ ಕಾರಣ ಕಳೆದೊಂದು ವರ್ಷದಿಂದ ಮೈದಾನದಿಂದ ದೂರವೇ ಉಳಿದಿದ್ದ ಅವರಿಗೆ ರಣಜಿ ಟೂರ್ನಿಯ ಮೂಲಕ ತಮ್ಮ ಫಿಟ್​ನೆಸ್ ಸಾಬೀತುಪಡಿಸುವಂತೆ ಬಿಸಿಸಿಐ ಸೂಚಿಸಿದೆ. ಅದರಂತೆ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಶಮಿ ಮೊದಲ ಪಂದ್ಯದಲ್ಲೇ 19 ಓವರ್​ಗಳನ್ನು ಎಸೆಯುವಲ್ಲಿ ಸಫಲರಾಗಿದ್ದಾರೆ. ಅಲ್ಲದೆ 4 ವಿಕೆಟ್ ಕಬಳಿಸಿ ಆಯ್ಕೆಗಾರರ ಗಮನ ಸೆಳೆದಿದ್ದಾರೆ.

5 / 5
Follow us
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ

ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ

ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ

ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್

ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್