ಮೊಹಮ್ಮದ್ ಶಮಿ ರಾಜಕೀಯ ಪ್ರವೇಶ? ಚರ್ಚೆ ಹುಟ್ಟುಹಾಕಿದ ವೈರಲ್ ಫೋಟೋ

Updated on: Sep 21, 2026 | 3:05 PM

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ, RLD ನಾಯಕ ಜಯಂತ್ ಚೌಧರಿ ಅವರನ್ನು ಭೇಟಿಯಾದ ನಂತರ ರಾಜಕೀಯ ಪ್ರವೇಶದ ಊಹಾಪೋಹಗಳಿಗೆ ಕಾರಣರಾಗಿದ್ದಾರೆ. ಮುಂದಿನ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಮ್ರೋಹದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. NDA ಮಿತ್ರಪಕ್ಷವಾದ RLD ಶಮಿಯನ್ನು ಕಣಕ್ಕಿಳಿಸಲು ಯೋಚಿಸುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲ, ಶಮಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿದೆ.

1 / 5
ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಅನುಭವಿಗಳ ಹಾಗೂ ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರ ಪ್ರಯಾಣ ಮುಗಿದಿದೆ ಎನ್ನಲಾಗುತ್ತಿದೆ. ಆದಾಗ್ಯೂ ತನ್ನ ಹೋರಾಟ ಬಿಡದ ಶಮಿ, ದೇಶಿ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ(PC-PTI).

ಟೀಂ ಇಂಡಿಯಾದ ಅನುಭವಿ ವೇಗಿ ಮೊಹಮ್ಮದ್ ಶಮಿ ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿವೆ. ಅನುಭವಿಗಳ ಹಾಗೂ ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಮೊಹಮ್ಮದ್ ಶಮಿ ಅವರ ಪ್ರಯಾಣ ಮುಗಿದಿದೆ ಎನ್ನಲಾಗುತ್ತಿದೆ. ಆದಾಗ್ಯೂ ತನ್ನ ಹೋರಾಟ ಬಿಡದ ಶಮಿ, ದೇಶಿ ಪಂದ್ಯಾವಳಿಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮತ್ತೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ(PC-PTI).

2 / 5

ಇದೆಲ್ಲದರ ನಡುವೆ ಮೊಹಮ್ಮದ್ ಶಮಿ ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಮೊಹಮ್ಮದ್ ಶಮಿ ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ನಾಯಕ ಜಯಂತ್ ಚೌಧರಿ ಅವರ ಭೇಟಿ. ಮೊಹಮ್ಮದ್ ಶಮಿ ಭಾನುವಾರದಂದು ದೆಹಲಿಯಲ್ಲಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ನಾಯಕ ಜಯಂತ್ ಚೌಧರಿ ಅವರನ್ನು ಭೇಟಿಯಾಗಿದ್ದಾರೆ. ಇವರಿಬ್ಬರ ಭೇಟಿಯ ಫೋಟೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

3 / 5

ಆದಾಗ್ಯೂ, ಈ ಭೇಟಿಯ ಬಗ್ಗೆ ಇಲ್ಲಿಯವರೆಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಆದಾಗ್ಯೂ, ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಮಿ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ. ಶಮಿ ಅಮ್ರೋಹಾ ಜಿಲ್ಲೆಯವರಾಗಿದ್ದು, ಈ ಕ್ಷೇತ್ರದಿಂದ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯ ಬಗ್ಗೆ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಹುಟ್ಟಿಕೊಂಡಿವೆ(PC-PTI).

4 / 5

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಆರ್‌ಎಲ್‌ಡಿ ಪಕ್ಷವು ಮಿತ್ರಪಕ್ಷವಾಗಿ ಮುಂದುವರೆದಿದ್ದು, ಅಮ್ರೋಹಾ ವಿಧಾನಸಭಾ ಕ್ಷೇತ್ರದಿಂದ ಆರ್‌ಎಲ್‌ಡಿ ಪಕ್ಷದಿಂದ ಶಮಿ ಸ್ಪರ್ಧಿಸುವ ಸಾಧ್ಯತೆಗಳು ಹೆಚ್ಚಿವೆ. ಇತ್ತ ಅಮ್ರೋಹಾ ಕ್ಷೇತ್ರದಿಂದ ಶಮಿ ಅವರನ್ನು ಕಣಕ್ಕಿಳಿಸುವ ಮೂಲಕ ಮತದಾರರನ್ನು ಮೆಚ್ಚಿಸಲು ಎನ್‌ಡಿಎ ಈಗ ಕಾರ್ಯತಂತ್ರ ರೂಪಿಸುತ್ತಿದೆ ಎಂತಲೂ ವರದಿಯಾಗಿದೆ(PC-PTI).

5 / 5

ಆದರೆ, ಶಮಿ ರಾಜಕೀಯ ಪ್ರವೇಶಿಸುವ ಬಗ್ಗೆ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಆದಾಗ್ಯೂ ಮೊಹಮ್ಮದ್ ಶಮಿ ರಾಜಕೀಯ ಪ್ರವೇಶಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವುದು ಇದೇ ಮೊದಲಲ್ಲ. 2024 ರ ಲೋಕಸಭಾ ಚುನಾವಣೆಗೆ ಮುಂಚೆಯೇ, ಶಮಿ ಬಂಗಾಳದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ, ಆ ಸಮಯದಲ್ಲಿಯೂ ಸಹ, ಅವರ ರಾಜಕೀಯ ಪ್ರವೇಶದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿರಲಿಲ್ಲ(PC-PTI).

Published On - 3:01 pm, Mon, 21 September 26

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us