ಟೀಮ್ ಇಂಡಿಯಾಗೆ ಗುಡ್ ನ್ಯೂಸ್: ಮೊಹಮ್ಮದ್ ಶಮಿ ರಿಟರ್ನ್ಸ್

Updated on: Nov 12, 2024 | 1:15 PM

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಇದೀಗ ಒಂದು ವರ್ಷದ ಬಳಿಕ ಟೀಮ್ ಇಂಡಿಯಾ ವೇಗಿ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ.

1 / 6
ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ನಾಳೆಯಿಂದ ಶುರುವಾಗಲಿರುವ ರಣಜಿ ಟ್ರೋಫಿಯ ಗ್ರೂಪ್-ಸಿ ಪಂದ್ಯದಲ್ಲಿ ಬಂಗಾಳ ಪರ ಶಮಿ ಕಣಕ್ಕಿಳಿಯುವುದು ಖಚಿತವಾಗಿದೆ. ಇದರೊಂದಿಗೆ ಟೀಮ್ ಇಂಡಿಯಾ ವೇಗಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿರುವುದು ಕೂಡ ಕನ್ಫರ್ಮ್ ಆದಂತಾಗಿದೆ.

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ನಾಳೆಯಿಂದ ಶುರುವಾಗಲಿರುವ ರಣಜಿ ಟ್ರೋಫಿಯ ಗ್ರೂಪ್-ಸಿ ಪಂದ್ಯದಲ್ಲಿ ಬಂಗಾಳ ಪರ ಶಮಿ ಕಣಕ್ಕಿಳಿಯುವುದು ಖಚಿತವಾಗಿದೆ. ಇದರೊಂದಿಗೆ ಟೀಮ್ ಇಂಡಿಯಾ ವೇಗಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುತ್ತಿರುವುದು ಕೂಡ ಕನ್ಫರ್ಮ್ ಆದಂತಾಗಿದೆ.

2 / 6

ಮೊಹಮ್ಮದ್ ಶಮಿ ಕಳೆದೊಂದು ವರ್ಷದಿಂದ ಮೈದಾನದಿಂದ ದೂರ ಉಳಿದಿದ್ದರು. ಪಾದದ ನೋವಿನ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಶಮಿ, ಇದೀಗ ಇಂದೋರ್​ನಲ್ಲಿ ನಡೆಯಲಿರುವ ಮಧ್ಯ ಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಮತ್ತೆ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

3 / 6

2023 ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ.

4 / 6

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ.

5 / 6

ಅಲ್ಲದೆ ಸಂಪೂರ್ಣ ಫಿಟ್​ನೆಸ್ ಸಾಧಿಸದ ಕಾರಣ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಆಯ್ಕೆ ಮಾಡಿರಲಿಲ್ಲ. ಇದೀಗ ಫಿಟ್​ನೆಸ್ ಸಾಧಿಸಿರುವ ಶಮಿ ದೇಶೀಯ ಅಂಗಳದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

6 / 6

ಇನ್ನು ರಣಜಿ ಟೂರ್ನಿಯಲ್ಲಿ ಎರಡು ಮೂರು ಪಂದ್ಯಗಳ ಮೂಲಕ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಿದರೆ, ಅವರನ್ನು ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ವೇಳೆ ತಂಡಕ್ಕೆ ಸೇರ್ಪಡೆಗೊಳಿಸಬಹುದು. ಹೀಗಾಗಿ ಮೊಹಮ್ಮದ್ ಶಮಿ ಅವರ ಕಂಬ್ಯಾಕ್ ಟೀಮ್ ಇಂಡಿಯಾ ಪಾಲಿಗೆ ಶುಭ ಸುದ್ದಿ ಎನ್ನಬಹುದು.

Loading...
Unable to load recommendations.
Follow Us