ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಮತ್ತೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.